ಕರ್ನಾಟಕ

karnataka

ಕಿತ್ತೂರು ಬಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ.. ಚಾಲಕ ಪ್ರಾಣಾಪಾಯದಿಂದ ಪಾರು - ವಿಡಿಯೋ

By ETV Bharat Karnataka Team

Published : Oct 30, 2023, 5:57 PM IST

ಹೊತ್ತಿ ಉರಿದ ಲಾರಿ

ಬೆಳಗಾವಿ : ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿಯೊಂದು ಹೊತ್ತಿ ಉರಿದ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ‌ ಲಾರಿಯ ಇಂಜಿನ್​ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಸಂಪೂರ್ಣ ಇಡೀ ಲಾರಿಗೆ ಬೆಂಕಿ ಆವರಿಸಿದೆ.    

ಇದನ್ನೂ ಓದಿ :ಬೆಂಗಳೂರು: ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ, 18 ಬಸ್‌ಗಳು ಬೆಂಕಿಗೆ ಆಹುತಿ

ತಕ್ಷಣವೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಿಹಾನಿಯಾಗಿಲ್ಲ. ಹೆದ್ದಾರಿ ಮಧ್ಯದಲ್ಲೇ ಲಾರಿಗೆ ಬೆಂಕಿ ಹತ್ತಿದ್ದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬಳಿಕ ಸರ್ವೀಸ್ ರಸ್ತೆ ಮೂಲಕ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಯಿತು. ಇದರಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಯಿತು. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಇದನ್ನೂ ಓದಿ :ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಡಿಕ್ಕಿ.. ಡ್ರೈವರ್​, ಕ್ಲೀನರ್ ಸಜೀವದಹನ

ABOUT THE AUTHOR

...view details