ಕರ್ನಾಟಕ

karnataka

ನಾಳೆ ಪ್ರಧಾನಿ ಭೇಟಿ, ಹೈಕಮಾಂಡ್​ ಸಭೆ: ದೆಹಲಿ ತಲುಪಿದ ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Dec 18, 2023, 10:46 PM IST

ದೆಹಲಿ ತಲುಪಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ರಾಜ್ಯದಲ್ಲಿನ ಬರಗಾಲ ಸಂಬಂಧ ಮಾತುಕತೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಾಗೂ ಇತರ ವಿಚಾರಗಳ ಬಗ್ಗೆ ಕಾಂಗ್ರೆಸ್​ ಹೈಕಮಾಂಡ್​ ಭೇಟಿಗೆಂದು ಸಿಎಂ ಸಿದ್ದರಾಮಯ್ಯ ದೆಹಲಿ ತಲುಪಿದ್ದಾರೆ. ಅಲ್ಲದೇ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್​, ಸಚಿವ ಜಮೀರ್​ ಅಹಮದ್​ ಖಾನ್ ಇತರರೂ ಸಹ ಈಗಾಗಲೇ ದೆಹಲಿಗೆ ತೆರಳಿದ್ದಾರೆ.  

ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ್ದ ಸಿಎಂ, ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ತಿಳಿಸಿದ್ದರು. ರಾಜ್ಯದಲ್ಲಿನ ಬರಗಾಲದ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸುತ್ತೇನೆ ಎಂದಿದ್ದರು.  

ಇದರ ಜೊತೆಗೆ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲೂ ಕೂಡ ಸಿಎಂ ಭಾಗವಹಿಸಲಿದ್ದಾರೆ. ಅಲ್ಲದೇ, ಲೋಕಸಭಾ ಚುನಾವಣೆ ಹಾಗೂ ನಿಗಮ ಮಂಡಳಿ ನೇಮಕಾತಿ ಕುರಿತು ಹೈಕಮಾಂಡ್ ಜೊತೆ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ಮಾಡಲಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ:  ನಾಳೆ ಪ್ರಧಾನಿ ಜೊತೆ ಬರಗಾಲದ ಬಗ್ಗೆ ಚರ್ಚೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details