ಕರ್ನಾಟಕ

karnataka

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್​ ಪಲ್ಟಿ!

By

Published : Sep 13, 2022, 7:28 PM IST

Updated : Feb 3, 2023, 8:27 PM IST

()
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್​ ಪಲ್ಟಿಯಾದ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದ ಬಳಿ ನಡೆದಿದ್ದು, ಬಸ್​​ ನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಓರ್ವರಿಗೆ ಗಂಭೀರ ಗಾಯವಾಗಿದೆ. ಹಾವೇರಿಯಿಂದ ಶಿರಸಿ ಕಡೆಗೆ ಹೊರಟಿದ್ದ ಸಾರಿಗೆ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳನ್ನ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated :Feb 3, 2023, 8:27 PM IST

ABOUT THE AUTHOR

...view details