ಕರ್ನಾಟಕ

karnataka

ಒಳ್ಳೆ ಕೆಲಸ ಮಾಡಿದ್ದರೆ ಸಿದ್ದರಾಮಯ್ಯಗೆ ಕ್ಷೇತ್ರ ಹುಡುಕುವ ಪರಿಸ್ಥಿತಿ ಬರುತ್ತಿರಲಿಲ್ಲ: ಸಚಿವ ​​ನಿರಾಣಿ

By

Published : Mar 19, 2023, 10:39 AM IST

ಒಳ್ಳೆ ಕೆಲಸ ಮಾಡಿದ್ದರೆ ಸಿದ್ದರಾಮಯ್ಯನವರಿಗೆ ಕ್ಷೇತ್ರ ಹುಡುಕುವ ಪರಿಸ್ಥಿತಿ ಬರುತ್ತಿರಲಿಲ್ಲ : ಸಚಿವ ಮುರಗೇಶ್​​​ ನಿರಾಣಿ

ಕಾರವಾರ (ಉತ್ತರ ಕನ್ನಡ) :ಗೆದ್ದ ಕ್ಷೇತ್ರದಲ್ಲಿಯೇ ಒಳ್ಳೆಯ ಕೆಲಸ ಮಾಡಿದ್ದರೆ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಬೇರೆ ಕ್ಷೇತ್ರ ಹುಡುಕುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್​​ ನಿರಾಣಿ ಟೀಕಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಾದಾಮಿಯಲ್ಲಿ ಸಿದ್ಧರಾಮಯ್ಯ ನನ್ನ ಜೊತೆ ಪಾಲುದಾರರಾಗಿದ್ದಾರೆ. ಬಾದಾಮಿ ತಾಲೂಕಿನ ಮೂರನೇ ಒಂದು ಭಾಗ ನನ್ನ ಕ್ಷೇತ್ರಕ್ಕೆ ಒಳಪಟ್ಟಿದ್ದು, ಇನ್ನೆರಡು ಭಾಗ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರಕ್ಕೆ ಸೇರಿದೆ. ಆ ಕ್ಷೇತ್ರದಲ್ಲೇ ಉತ್ತಮ ಕೆಲಸ ಮಾಡಿದ್ದರೆ ಕ್ಷೇತ್ರ ಬಿಟ್ಟು ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ. ಇದೀಗ ಕೋಲಾರದಲ್ಲೂ ಗೆಲ್ಲುವುದು ಖಾತ್ರಿ ಇಲ್ಲ ಎಂದಾಗ ಮತ್ತೆ ಬೇರೆ ಕ್ಷೇತ್ರ ಹುಡುಕುವ ಪರಿಸ್ಥಿತಿ ಬಂದಿದೆ. ಹೀಗಾಗಿ ವರುಣಾ ಕ್ಷೇತ್ರದಲ್ಲಿಯೂ ಅವರು ನಿಲ್ಲೋದು ಗ್ಯಾರಂಟಿ ಇಲ್ಲ ಎಂದು ಟೀಕಿಸಿದರು.

ಸಿದ್ದರಾಮಯ್ಯ ಬೇರೆಯವರ ಬಗ್ಗೆ ಟೀಕೆ ಮಾಡುವುದನ್ನು ಬಿಡಲಿ. ಅವರು ಒಳ್ಳೆಯದನ್ನು ಮಾಡಿದ್ದರೆ ಈ ರೀತಿ ಬೇರೆ ಕ್ಷೇತ್ರ ಹುಡುಕುವ ಪರಿಸ್ಥಿತಿ ಬರುತ್ತಿರಲಿಲ್ಲ. ಅವರ ಬಗ್ಗೆ ಹೆಚ್ಚು ಹೇಳುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಇದೇ ವೇಳೆ ಕಾಲೆಳೆದರು.

ಇದನ್ನೂ ಓದಿ:ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ: ಆರ್​ ಅಶೋಕ್

ABOUT THE AUTHOR

...view details