ಕರ್ನಾಟಕ

karnataka

ಡಿ. 9ರ ಬಳಿಕ ಮತ್ತೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದ್ರೂ ಬರಬಹುದು: ಎಸ್.ಆರ್.ಪಾಟೀಲ್​​​​

By

Published : Dec 3, 2019, 4:51 PM IST

ರಾಣೆಬೆನ್ನೂರು: ದೇವರು ಧರೆಗಿಳಿದು ಬಂದ್ರೂ ರಾಜ್ಯದಲ್ಲಿ ಬಿಜೆಪಿ ಮುಂದುವರೆಯಲ್ಲ ಎಂದು ವಿಧಾನ ಪರಿಷತ್​ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್​​ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. 9ರ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿ ಮತ್ತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿವೆ. ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕನಿಷ್ಠ 12 ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ. ಅನರ್ಹ ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ. ನಿರೀಕ್ಷೆಗೂ ಮೀರಿದ ಫಲಿತಾಂಶ ಬರುತ್ತದೆ ಎಂದರು.

ABOUT THE AUTHOR

...view details