ತುಮಕೂರು: ಬಿಜೆಪಿ ಬಗ್ಗೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಯಾವುದೇ ರೀತಿಯ ಸಾಫ್ಟ್ ಕಾರ್ನರ್ ತೋರಿಸುತ್ತಿಲ್ಲ. ಅವರು ಅವರ ರಾಜಕಾರಣ ಮಾಡ್ತಾರೆ, ನಾವು ನಮ್ಮ ರಾಜಕಾರಣ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಸಚಿವ ಮಾಧುಸ್ವಾಮಿ ಅವರ ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ರೀತಿ ಪ್ರತಿಕ್ರಿಯೆ ನೀಡಿದರು.