ಕುಲ್ಲು , ಹಿಮಾಚಲಪ್ರದೇಶ: ಹೈದರಾಬಾದ್‌ನ ಪ್ರವಾಸಿಗರೊಬ್ಬರು ಪ್ಯಾರಾಗ್ಲೈಡಿಂಗ್ ವೇಳೆ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ದೋಭಿ ಎಂಬಲ್ಲಿ ಪ್ಯಾರಾಗ್ಲೈಡಿಂಗ್ ಸೈಟ್‌ನಲ್ಲಿ ಸಂಭವಿಸಿದೆ. ಪ್ಯಾರಾಗ್ಲೈಡರ್‌ನ ಪೈಲಟ್ ಪ್ರವಾಸಿ ಮಹಿಳೆಗೆ ಸರಿಯಾಗಿ ಬೆಲ್ಟ್ ಹಾಕಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕಾಗಿ ಮಹಿಳಾ ಪ್ರವಾಸಿ ಪ್ಯಾರಾಗ್ಲೈಡಿಂಗ್ ಮಾಡುವಾಗ ಎತ್ತರದಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ದೋಭಿ ಪ್ಯಾರಾಗ್ಲೈಡಿಂಗ್ ಅಪಘಾತ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಮುಂದಿನ ಆದೇಶದವರೆಗೆ ಪ್ಯಾರಾಗ್ಲೈಡಿಂಗ್ ಅನ್ನು ನಿಷೇಧಿಸಲಾಗಿದೆ. ಜಿಲ್ಲಾ ಪ್ರವಾಸೋದ್ಯಮ ಅಧಿಕಾರಿ ಸುನೈನಾ ಶರ್ಮಾ ಮಾತನಾಡಿ, ಪೈಲಟ್ ನೋಂದಣಿ ಮತ್ತು ಉಪಕರಣಗಳನ್ನು ಸಹ ಅನುಮೋದಿಸಲಾಗಿದೆ. ಮ್ಯಾಜಿಸ್ಟ್ರೇಟ್ ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಮತ್ತು ಮುಂದಿನ ಆದೇಶದವರೆಗೆ ದೋಭಿಯಲ್ಲಿ ಪ್ಯಾರಾಗ್ಲೈಡಿಂಗ್ ಸ್ಥಗಿತಗೊಳಿಸಲಾಗುತ್ತಿದೆ ಎಂದು ಸುನೈನಾ ಶರ್ಮಾ ಹೇಳಿದ್ದಾರೆ. ಹೈದರಾಬಾದ್‌ನಿಂದ ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ 26 ವರ್ಷದ ನವ್ಯಾ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಪೈಲಟ್ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು 334 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪೈಲಟ್ ಅನ್ನು ಪೊಲೀಸರು ಬಂಧಿಸಿದ್ದಾರೆ.