ಕರ್ನಾಟಕ

karnataka

ಬಿಆರ್‌ಎಸ್ ಎಂಎಲ್‌ಸಿ ಕವಿತಾ ಪ್ರಶ್ನಿಸಲು ಸಿಬಿಐಗೆ ಕೋರ್ಟ್ ಅನುಮತಿ - MLC Kavitha

By ETV Bharat Karnataka Team

Published : Apr 5, 2024, 7:49 PM IST

Delhi liquor case: ತಿಹಾರ್​ ಜೈಲಿನಲ್ಲಿರುವ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರನ್ನು ಪ್ರಶ್ನಿಸಲು ಸಿಬಿಐಗೆ ರೂಸ್ ಅವೆನ್ಯೂ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ.

ROUSE AVENUE COURT  COURT GAVE PERMISSION TO CBI  CBI TO QUESTION MLC KAVITHA
ಬಿಆರ್‌ಎಸ್ ಎಂಎಲ್‌ಸಿ ಕವಿತಾ

ನವದೆಹಲಿ:ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರನ್ನು ವಿಚಾರಣೆ ನಡೆಸಲು ಸಿಬಿಐ ಅನುಮತಿ ಪಡೆದಿದೆ. ತಿಹಾರ್​ ಜೈಲಿನಲ್ಲಿರುವ ಆರೋಪಿಯನ್ನು ಪ್ರಶ್ನಿಸಲು ಸಿಬಿಐ, ರೂಸ್ ಅವೆನ್ಯೂ ನ್ಯಾಯಾಲಯವನ್ನು ಸಂಪರ್ಕಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಜೈಲು ಅಧಿಕಾರಿಗಳಿಗೆ ತಿಳಿಸಲು ಆದೇಶಿಸಲಾಗಿದೆ. ವಿಚಾರಣೆಯ ಸಂದರ್ಭ ಮಹಿಳಾ ಕಾನ್‌ಸ್ಟೇಬಲ್‌ಗಳು ಹಾಜರಿರಬೇಕು ಎಂದು ಷರತ್ತು ವಿಧಿಸಿದೆ. ಲ್ಯಾಪ್‌ಟಾಪ್ ಮತ್ತು ಇತರ ಲೇಖನ ಸಾಮಗ್ರಿಗಳನ್ನು ತರುವಂತೆಯೂ ತಿಳಿಸಲಾಗಿದೆ.

ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಸೋಮವಾರಕ್ಕೆ ಕಾಯ್ದಿರಿಸಿದೆ. ಮಗನ ಪರೀಕ್ಷೆಗೆ ಜಾಮೀನು ನೀಡುವಂತೆ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನೀಡಿದರೆ ಸಾಕ್ಷ್ಯಾಧಾರಗಳ ಮೇಲೆ ಪರಿಣಾಮ ಬೀರಲಿದೆ ಎಂದು ಇಡಿ ವಾದಿಸಿದೆ. ಮದ್ಯ ಪ್ರಕರಣದಲ್ಲಿ ಕವಿತಾ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಕವಿತಾ ತನ್ನ 10 ಸೆಲ್‌ಫೋನ್‌ಗಳನ್ನು ನೀಡಿದ್ದಾರೆ. ಆದರೆ ಆ ಫೋನ್​ಗಳನ್ನು ನಮಗೆ ಫಾರ್ಮ್ಯಾಟ್ ಮಾಡಿದ್ದಾರೆ. ನೋಟಿಸ್ ನೀಡಿದ ನಂತರವೂ ನಾಲ್ಕು ಫೋನ್‌ಗಳನ್ನು ಫಾರ್ಮ್ಯಾಟ್ ಮಾಡಲಾಗಿದೆ ಎಂದು ಇಡಿ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕವಿತಾ ವಿರುದ್ಧ ಸಾಕ್ಷಿ ಹೇಳುವಂತೆ ಅನುಮೋದಿತ ಆರೋಪಿಗಳಿಗೆ ಬೆದರಿಕೆ ಹಾಕಿರುವುದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ. ಮಗನಿಗಾಗಿ ಜಾಮೀನು ಕೋರಿರುವ ಕವಿತಾ ಕಿರಿಯ ಮಗ ಒಬ್ಬಂಟಿಯಾಗಿಲ್ಲ. ಆತನ ಸಹೋದರ ಮತ್ತು ಕುಟುಂಬ ಸದಸ್ಯರೊಂದಿಗೆ ಇದ್ದಾನೆ ಎಂದು ಇಡಿ ಹೇಳಿದೆ. ಬುಧವಾರ ಇಡಿ ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ತನ್ನ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿತ್ತು.

ಪ್ರಕರಣವೇನು?: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಕವಿತಾ ಮೊದಲಿನಿಂದಲೂ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಇವರು ಎರಡು ಬಾರಿ ಇಡಿ ವಿಚಾರಣೆಗೆ ಹಾಜರಾಗಿದ್ದರು. ಆ ಬಳಿಕ ತನಿಖೆಗೆ ಹಾಜರಾಗದೆ, ತನ್ನನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಂದಿನಿಂದಲೂ ತನಗೆ ಕಳುಹಿಸಿದ ಇಡಿ ನೋಟಿಸ್‌ಗಳಿಗೆ ವಿವರಣೆ ನೀಡಿದರೇ ಹೊರತು ವಿಚಾರಣೆಗೆ ಹಾಜರಾಗಿರಲಿಲ್ಲ. ಆದರೆ ಮಾರ್ಚ್ 15ರಂದು ಇಡಿ ಅಧಿಕಾರಿಗಳು ಕವಿತಾ ಮನೆಯಲ್ಲಿ ಶೋಧ ನಡೆಸಿದ್ದರು.

ಶೋಧ ಪೂರ್ಣಗೊಂಡ ನಂತರ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬಂಧನ ವಾರಂಟ್ ಜಾರಿ ಮಾಡಲಾಗಿದ್ದು, ತಕ್ಷಣವೇ ಅವರನ್ನು ವಿಮಾನದ ಮೂಲಕ ದೆಹಲಿಗೆ ಕರೆದೊಯ್ಯಲಾಯಿತು. ಮಾರ್ಚ್ 16 ರಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಆರೋಪಿಯನ್ನು 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿತು. ಇದಾದ ನಂತರ ದೆಹಲಿಯ ತಿಹಾರ್​ ಜೈಲಿಗೆ ಸ್ಥಳಾಂತರಿಸಲಾಯಿತು.

ಇದನ್ನೂ ಓದಿ:ಜೈಲಿನಿಂದ ಪತ್ರ ಬರೆದ ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ - Manish Sisodia

ABOUT THE AUTHOR

...view details