ಕರ್ನಾಟಕ

karnataka

ಸೂರತ್‌ನಿಂದ ಅಭ್ಯರ್ಥಿ ಅವಿರೋಧ ಆಯ್ಕೆ: ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಖಾತೆ ತೆರೆದ ಬಿಜೆಪಿ - SURAT LOK SABHA CONSTITUENCY

By PTI

Published : Apr 22, 2024, 5:22 PM IST

Updated : Apr 22, 2024, 5:29 PM IST

ಗುಜರಾತ್‌ನ ಸೂರತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

surat-bjp-candidate-mukesh-dalal-elected-to-lok-sabha-unanimously
ಸೂರತ್‌ನಿಂದ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೊದಲು ಗೆಲುವು

ಸೂರತ್ (ಗುಜರಾತ್​):ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಹಿನ್ನೆಲೆ ಸೂರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯದ ಬಿಜೆಪಿ ಮುಖ್ಯಸ್ಥ ಸಿ. ಆರ್. ಪಾಟೀಲ್ ತಿಳಿಸಿದ್ದಾರೆ.

"ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ಸೂರತ್​ನಿಂದ ಮೊದಲ ಜಯವನ್ನು ಅರ್ಪಿಸಿದೆ. ಸೂರತ್ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ" ಎಂದು ಪಾಟೀಲ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ​ ಪೋಸ್ಟ್​ ಮಾಡಿದ್ದಾರೆ.

ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಇಂದು(ಸೋಮವಾರ), ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿ ಸೇರಿದಂತೆ 8 ಮಂದಿ ನಾಮಪತ್ರವನ್ನು ಹಿಂಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ಸೂಚಕರ ಸಹಿಯಲ್ಲಿ ಆಗಿರುವ ವ್ಯತ್ಯಾಸ ಜಿಲ್ಲಾ ಚುನಾವಣಾಧಿಕಾರಿಗೆ ಕಂಡುಬಂದ ಕಾರಣ ಅವರ ನಾಮಪತ್ರವನ್ನು ಭಾನುವಾರ ತಿರಸ್ಕರಿಸಲಾಗಿತ್ತು. ಇದರೊಂದಿಗೆ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವೂ ಅಸಿಂಧುಗೊಂಡಿದೆ.

ಇದನ್ನೂ ಓದಿ:ಸರನಿಯಾ ನಾಮಪತ್ರ ರದ್ದು; ಸತತ ಮೂರನೇ ಬಾರಿಗೆ ಸಂಸದರಾಗುವ ಕನಸು ಭಗ್ನ - Nomination Cancelled

Last Updated : Apr 22, 2024, 5:29 PM IST

ABOUT THE AUTHOR

...view details