ಕರ್ನಾಟಕ

karnataka

ಶಿವಮೊಗ್ಗ: 89 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

By ETV Bharat Karnataka Team

Published : Jan 29, 2024, 11:46 AM IST

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Pourakarmikaru Job Recruitment by Shivamogga City Corporation
Pourakarmikaru Job Recruitment by Shivamogga City Corporation

ಬೆಂಗಳೂರು: ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 89 ಹುದ್ದೆಗಳ ನೇಮಕಾತಿ ನಡೆಯಲಿದೆ.

ಅರ್ಹತೆ: ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು. ಹಾಲಿ ನೇರ ಪಾವತಿ, ಕ್ಷೇಮಾಭಿವೃದ್ಧಿ/ದಿನಗೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಕ್ಕೆ ಕಡಿಮೆ ಇಲ್ಲದಂತೆ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿರಬೇಕು.

ವಯೋಮಿತಿ:55 ವರ್ಷ ಮೀರಿರಬಾರದು.

ವೇತನ: 17,000- 28,950 ರೂ (ಮಾಸಿಕ)

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆಫ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಆಯುಕ್ತರು, ಮಹಾನಗರ ಪಾಲಿಕೆ, ಶಿವಮೊಗ್ಗ ಕಚೇರಿಯಿಂದ ಅರ್ಜಿ ಪಡೆಯಬೇಕು. ಈ ಅರ್ಜಿಯ ಜೊತೆಗೆ ಮೀಸಲಾತಿ, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಂತಿಮ ದಿನಾಂಕಕ್ಕೆ ಮುನ್ನ ಅರ್ಜಿ ಪಡೆದ ವಿಳಾಸದಲ್ಲಿ ಸಲ್ಲಿಸಬೇಕು.

ಅಧಿಸೂಚನೆ

ಪ.ಜಾ, ಪ.ಪಂ, ಪ್ರವರ್ಗ 1, ವಿಶೇಷಚೇತನ ಮತ್ತು ಮಹಿಳಾ ಅಭ್ಯರ್ಥಿಗಳು 100 ರೂ ಪಾವತಿಸಿ ಅರ್ಜಿ ಶುಲ್ಕ ಪಡೆಯಬೇಕು. ಉಳಿದ ವರ್ಗದ ಅಭ್ಯರ್ಥಿಗಳು 200 ರೂ ನಗದು ಚಲನ್​ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಈ ಹುದ್ದೆಗಳನ್ನು ಮೆರಿಟ್​ ಮೇಲೆ ಆಯ್ಕೆ ಮಾಡಲಾಗುತ್ತದೆ. ಜನವರಿ 24ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 22 ಕಡೇಯ ದಿನಾಂಕ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು shivamoggacity.mrc.gov.in ಇಲ್ಲಿಗೆ ಭೇಟಿ ನೀಡಿ.

ಬೀದರ್​ನಲ್ಲಿ ಅಂಗನವಾಡಿ ಹುದ್ದೆಗಳು:ಬೀದರ್‌ನಲ್ಲಿ ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 96 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. 31 ಅಂಗನವಾಡಿ ಕಾರ್ಯಕರ್ತರು ಮತ್ತು 65 ಅಂಗನವಾಡಿ ಸಹಾಯಕರ ಹುದ್ದೆಗೆ ನೇಮಕಾತಿ ನಡೆಯಲಿದೆ. ಜನವರಿ 10ರಿಂದ ಫೆಬ್ರವರಿ 5ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಗ್ರಾಮಾಂತರ ಪ್ರದೇಶ ಮತ್ತು ನಗರ ಪ್ರದೇಶದಲ್ಲಿ ವಾಸ್ತವ್ಯ ಹೊಂದಿದ್ದು, ಪ್ರಮಾಣ ಪತ್ರ ಸಲ್ಲಿಸಬೇಕು. ಕನ್ನಡ ಓದುವ, ಬರೆಯುವ ಜ್ಞಾನ ಇರಬೇಕು. ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ karnemakaone.kar.nic.in/abcd/ApplicationForm_JA_org.aspx ಇಲ್ಲಿಗೆ ಭೇಟಿ ನೀಡಬಹುದು.

ಇದನ್ನೂ ಓದಿ: ರಕ್ಷಣಾ ಇಲಾಖೆಯಲ್ಲಿ ನೇಮಕಾತಿ; ಎಸ್​ಎಸ್​ಎಲ್​ಸಿ ಪಾಸಾದವರಿಗೆ ಅವಕಾಶ

ABOUT THE AUTHOR

...view details