ಕರ್ನಾಟಕ

karnataka

ವಿಯೆಟ್ನಾಂನಲ್ಲಿ 'ಕೃಷ್ಣಂ ಪ್ರಣಯ ಸಖಿ' ಚಿತ್ರೀಕರಣ ಪೂರ್ಣ: ಗಣೇಶ್​​ ಸಿನಿಮಾ ಬಗ್ಗೆ ಹೆಚ್ಚಿದ ಕುತೂಹಲ

By ETV Bharat Karnataka Team

Published : Mar 19, 2024, 12:59 PM IST

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

Krishnam Pranaya Sakhi
ಕೃಷ್ಣಂ ಪ್ರಣಯ ಸಖಿ

ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದಲ್ಲಿ ಬಹುಸಮಯದಿಂದ ಗುರುತಿಸಿಕೊಂಡಿರುವ ಜನಪ್ರಿಯ ನಟ. ಕಿರುತೆರೆ ಕಾರ್ಯಕ್ರಮಗಳ ಮೂಲಕ ಕಾಮಿಡಿ ಮಾಡುತ್ತಾ ಸ್ಟಾರ್ ಪಟ್ಟ ಅಲಂಕರಿಸಿದ ಗೋಲ್ಡನ್​ ಬಾಯ್​​. ಚಿತ್ರರಂಗದಲ್ಲಿ ಇವರಿಗೆ ಸಾಕಷ್ಟು ಬೇಡಿಕೆ ಇದ್ದು, ತಮ್ಮದೇ ಆದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಾಮಿಡಿ ಶೋ‌ ಮೂಲಕ ಜನಪ್ರಿಯತೆ ಸಂಪಾದಿಸಿ,‌ ಮುಂಗಾರು ಮಳೆ ಸಿನಿಮಾದಿಂದ ಕನ್ನಡಿಗರ ಮನೆ ಮಗನಾದ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ 'ಕೃಷ್ಣಂ ಪ್ರಣಯ ಸಖಿ' ಸಿನಿಮಾದ ಜಪ ಮಾಡುತ್ತಿದ್ದಾರೆ.

ವಿಯೆಟ್ನಾಂನಲ್ಲಿ ಚಿತ್ರೀಕರಣ ಪೂರ್ಣ: ಹೌದು, ಗಣಿ ನಟನೆಯ ಮುಂದಿನ ಬಹುನಿರೀಕ್ಷಿತ ಸಿನಿಮಾ 'ಕೃಷ್ಣಂ ಪ್ರಣಯ ಸಖಿ'. ಕನ್ನಡದ ಹಲವು ಯಶಸ್ವಿ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಬಹುನಿರೀಕ್ಷೆಯ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಚಿತ್ರೀಕರಣ ವಿಯೆಟ್ನಾಂನಲ್ಲಿ ಪೂರ್ಣಗೊಂಡಿದೆ.

ಪೋಸ್ಟ್‌ ಪ್ರೊಡಕ್ಷನ್ ಕೆಲಸ ಚುರುಕು: ಅಲ್ಲಿ ಚಿತ್ರದ ಎರಡು ಹಾಡುಗಳು ಹಾಗೂ ಕೆಲವು ಮಾತಿನ ಭಾಗದ ಶೂಟಿಂಗ್​​ ನಡೆದಿದೆ. ಈ ಸೀನ್​ಗಳೊಂದಿಗೆ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯ ಆಗಿದೆ. ಗಣೇಶ್, ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಸೇರಿದಂತೆ ಕೆಲವರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಪ್ರಸ್ತುತ ರೀರೆಕಾರ್ಡಿಂಗ್ ನಡೆಯುತ್ತಿದ್ದು, ಚಿತ್ರತಂಡ ಪೋಸ್ಟ್‌ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

ಗೋಲ್ಡನ್​ ಸ್ಟಾರ್ ಗಣೇಶ್

ಇದನ್ನೂ ಓದಿ:ಪವನ್ ಒಡೆಯರ್ ನಿರ್ಮಾಣದ ಚಿತ್ರದಲ್ಲಿ ನಟನೆಯೊಂದಿಗೆ ನಿರ್ದೇಶನಕ್ಕಿಳಿದ ಸಾಗರ್ ಪುರಾಣಿಕ್

ಗಣೇಶ್ ಅಭಿನಯದ 41ನೇ ಸಿನಿಮಾ:'ಕೃಷ್ಣಂ ಪ್ರಣಯ ಸಖಿ' ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ಸ್ಕ್ರೀನ್​ ಶೇರ್ ಮಾಡಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಸೇರಿದಂತೆ ಮೊದಲಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ:ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆಗೆ ರಸ್ತೆಯಲ್ಲಿ ಒಬ್ಬ ಮಹಿಳೆಯೂ ಇಲ್ಲ: ಪುರುಷ ಪ್ರಧಾನ ವ್ಯವಸ್ಥೆ ಬಗ್ಗೆ ಸಿದ್ಧಾರ್ಥ್​ ಟೀಕೆ

ಸಿನಿಮಾದಲ್ಲಿ ಐದು ಸುಮಧುರ ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ ಪ್ರಕಾಶ್ ಸಂಕಲನ ಕೃಷ್ಣಂ ಪ್ರಣಯ ಸಖಿ ಚಿತ್ರಕ್ಕಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್​ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಚಿತ್ರದ ಟೈಟಲ್​ನಿಂದಲೇ ಟಾಕ್ ಆಗುತ್ತಿರುವ ಕೃಷ್ಣಂ ಪ್ರಣಯ ಸಖಿ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧತೆ ನಡೆಸುತ್ತಿದೆ.

ABOUT THE AUTHOR

...view details