ಚಿಕ್ಕಮಗಳೂರು:ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಯಾತ್ರಾರ್ಥಿಯೊಬ್ಬರು ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿ ಮಧುಸೂದನ್ (52) ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆ ಹಾರಕ್ಕೆ ಬರುತ್ತಿದ್ದಂತೆ ಶೌಚಾಲಯಕ್ಕೆ ಎಂದು ನಿಲ್ಲಿಸಲಾಗಿತ್ತು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ಗೆ ಹಠಾತ್ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.