ಕರ್ನಾಟಕ

karnataka

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; ಮೂವರು ಸೆರೆ, 7 ವಿದೇಶಿ ಮಹಿಳೆಯರ ರಕ್ಷಣೆ

By ETV Bharat Karnataka Team

Published : Feb 25, 2024, 12:20 PM IST

ಬೆಂಗಳೂರಿನ ಯಲಹಂಕದಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Bengaluru police busts prostitution-racket
ಯಲಹಂಕದಲ್ಲಿ ವೇಶ್ಯಾವಾಟಿಕೆ ದಂಧೆ

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಯಲಂಹಕದ ರೋರಾ ಲಕ್ಸುರಿ ಥಾಯ್ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಏಳು ಮಂದಿ ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿದೆ.

ಯಲಹಂಕ ಉಪ ನಗರದ ಬಿ ಸೆಕ್ಟರ್​ನಲ್ಲಿರುವ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಥಾಯ್ಲೆಂಡ್ ದೇಶದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವುದು ಗೊತ್ತಾಗಿದೆ. ಟೂರಿಸ್ಟ್ ವೀಸಾ ಹಾಗೂ ಬಿಸ್ನೆಸ್ ವೀಸಾ ಮೂಲಕ ಆರೋಪಿಗಳು ಮಹಿಳೆಯರನ್ನು ಕರೆ ತಂದಿರುವುದು ತನಿಖೆಯಲ್ಲಿ ಬಯಲಾಗಿದೆ.

ಆಂಜನೇಯ ಗೌಡ, ಆಂಜನೇಯ ರೆಡ್ಡಿ ಹಾಗೂ ಹರೀಶ್ ಬಂಧಿತ ಆರೋಪಿಗಳು. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪದೇ ಪದೆ ನಿಯಮ‌ ಉಲ್ಲಂಘಿಸುವ ವಾಹನ ಸವಾರರೇ ಎಚ್ಚರ: ವಾಹನ ನಾಶಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ

ABOUT THE AUTHOR

...view details