ಕರ್ನಾಟಕ

karnataka

ಲೋಕಸಭೆ: ನಾನು ಟಿಕೆಟ್ ಆಕಾಂಕ್ಷಿಯಲ್ಲ, ವರಿಷ್ಠರ ಸೂಚನೆಯಂತೆ ನಡೆದುಕೊಳ್ಳುವೆ-ಶೆಟ್ಟರ್

By ETV Bharat Karnataka Team

Published : Feb 14, 2024, 6:26 PM IST

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸುವ ಬಗ್ಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಪ್ರತಿಕ್ರಿಯಿಸಿದರು.

ನಾನು ಯಾವ ಕ್ಷೇತ್ರದ ಆಕಾಂಕ್ಷಿಯೂ ಅಲ್ಲ, ವರಿಷ್ಠರ ಸೂಚನೆಯಂತೆ ನಡೆಯುವೆ: ಮಾಜಿ ಸಿಎಂ‌ ಶೆಟ್ಟರ್
ನಾನು ಯಾವ ಕ್ಷೇತ್ರದ ಆಕಾಂಕ್ಷಿಯೂ ಅಲ್ಲ, ವರಿಷ್ಠರ ಸೂಚನೆಯಂತೆ ನಡೆಯುವೆ: ಮಾಜಿ ಸಿಎಂ‌ ಶೆಟ್ಟರ್

ಚಾಮರಾಜನಗರ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, "ನಾನು ಟಿಕೆಟ್ ಆಕಾಂಕ್ಷಿ ಅಲ್ಲ. ಒಂದು ವೇಳೆ ಪಕ್ಷದ ವರಿಷ್ಠರು ಹೇಳಿದರೆ ಅವರ ಸೂಚನೆಯಂತೆ ನಡೆದುಕೊಳ್ಳುತ್ತೇನೆ" ಎಂದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಗೊಂದಲದ ಬಗ್ಗೆಯೂ ಮಾತನಾಡುತ್ತಾ, "ಪ್ರೀತಂ ಗೌಡ ಹೇಳಿಕೆ ವೈಯಕ್ತಿಕ. ಪಕ್ಷದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ವರಿಷ್ಠರು ಏನು ಹೇಳುತ್ತಾರೋ ಅದಕ್ಕೆ ಎಲ್ಲರೂ ತಲೆಬಾಗಲೇಬೇಕು" ಎಂದು‌ ತಮ್ಮ ನಿಲುವು ವ್ಯಕ್ತಪಡಿಸಿದರು.

"ಈ ಬಗ್ಗೆ ಅಮಿತ್ ಶಾ ಅವರು ಸಭೆಯಲ್ಲಿ ಏನು ಹೇಳಿರಬಹುದು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಪ್ರಮುಖವಾಗಿ ಸುತ್ತೂರು ಮಠದ ಕಾರ್ಯಕ್ರಮಕ್ಕೆ ಬಂದಿದ್ದರು. ಆ ಸಮಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಕೆಲವು ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ,. ನಾನು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದ ಕಾರಣ ಅಮಿತ್ ಶಾರನ್ನು ಭೇಟಿ ಮಾಡಿಲ್ಲ" ಎಂದು ಸ್ಪಷ್ಟನೆ ನೀಡಿದರು.

ಬಳಿಕ ದೆಹಲಿ ಚಲೋ ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ, ರೈತರ ಮೇಲೆ ಲಾಠಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ, ಆರೋಪ ಮಾಡುವವರು ಮಾಡುತ್ತಲೇ ಇರುತ್ತಾರೆ. ಆದರೆ ವಾಸ್ತವವಾಗಿ ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಈ ಹಿಂದೆಯೂ ಸ್ಪಂದಿಸಿದೆ, ಮುಂದೆಯೂ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸ್ಪಂದಿಸುತ್ತಾರೆ. ರೈತರ ಜೊತೆ ಚರ್ಚೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ರೈತ ಮುಖಂಡರು ಸಂಬಂಧಪಟ್ಟ ಸಚಿವರ ಜೊತೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು" ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಪಕ್ಷದಲ್ಲಿ ಏನನ್ನು ಕೇಳಿಲ್ಲ, ನಾನು ಸ್ವತಂತ್ರ ಹಕ್ಕಿ ಇದ್ದಂತೆ: ಬಸನಗೌಡ ಪಾಟೀಲ್ ಯತ್ನಾಳ್

ABOUT THE AUTHOR

...view details