ಕರ್ನಾಟಕ

karnataka

ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ಕೊಡಬೇಕು ಎಂದಿದ್ದೆ ಆದ್ರೆ ಕೊಡಲಿಲ್ಲ: ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Feb 3, 2024, 4:07 PM IST

Updated : Feb 3, 2024, 6:32 PM IST

ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ್ ಸ್ವಾಮೀಜಿಯವರಿಗೆ ಭಾರತರತ್ನ ಕೊಡಬೇಕು ಎಂದು ಈ ಹಿಂದೆ ಪತ್ರ ಬರೆದಿದ್ದ. ಆದರೆ ಕೊಟ್ಟಿಲ್ಲ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.

ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ಕೊಡಬೇಕು ಎಂದಿದ್ದೇ
ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ಕೊಡಬೇಕು ಎಂದಿದ್ದೇ

ಸಿಎಂ ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ:ಲಿಂಗೈಕ್ಯ ಶಿವಕುಮಾರ್​​ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬೇಕೆಂದು ಪತ್ರ ಬರೆದಿದ್ದೆ. ಆದರೆ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಎಲ್ ಕೆ ಅಡ್ವಾನಿಯವರಿಗೆ ಭಾರತ ರತ್ನ ಕೊಟ್ಟಿದ್ದಾರೆ ಎಂಬ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಭಾರತ ರತ್ನ ಕೊಡಲಿ. ಬೇಡ ಅನ್ನೋಕೆ ಆಗುತ್ತಾ, ಈ ಹಿಂದೆ ನಾನು ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ್ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡಬೇಕು ಅಂತಾ ಮನವಿ ಮಾಡಿದ್ದೆ. ಆದರೇ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಬಳಿಕ ಈಶ್ವರಾನಂದ ಪುರಿ ಶ್ರೀಯವರಿಗೆ ಚನ್ನಕೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ಪ್ರವೇಶ ನಿಷೇಧ ಮಾಡಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಇದು ಗೊತ್ತಿಲ್ಲದ ವಿಚಾರ. ಅದು ನನ್ನ ಗಮನಕ್ಕೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇನ್ನು ರಾಜ್ಯದ ಹತ್ತು ಜಿಲ್ಲೆಗಳಲ್ಲಿ ನಗರೋತ್ಥಾನ ಯೋಜನೆಯಲ್ಲಿ ಕಾಮಗಾರಿ ಬಿಲ್ ಪಾಸ್ ಮಾಡಲು ಅಧಿಕಾರಿಗಳು ಗುತ್ತಿಗೆದಾರರಿಗೆ ಸತಾಯಿಸುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ನಮಗೆ ದೂರು ನೀಡಿದರೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಬಳಿಕ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಟಿಕೆಟ್​ ಪಟ್ಟಿ ಸಿದ್ಧತೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಲೋಕಸಭಾ ಚುನಾವಣೆ ಪಟ್ಟಿ ಅದಷ್ಟು ಬೇಗ ಆಗುತ್ತೆ, ಅದಕ್ಕಾಗಿ ಸರ್ವೆ ನಡೆಯುತ್ತಿದೆ ಎಂದು ಹೇಳಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಪುತ್ರನಿಗೆ ಲೋಕಸಭಾ ಚುನಾವಣೆ ಟಿಕೆಟ್​ ನೀಡುವ ವಿಚಾರವಾಗಿ ಮಾತನಾಡಿ, ಅವರು ಆಕಾಂಕ್ಷಿ ಅವರನ್ನು ಟಿಕೆಟ್ ಕೇಳ್ಬೇಡಿ ಎನ್ನಲಾಗುತ್ತಾ, ಟಿಕೆಟ್ ಕೇಳ್ತಾರೆ ನೋಡೋಣ, ನಮ್ಮ‌ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಸ್ಥಳೀಯ ಲೀಡರ್​ಗಳ ಶಾಸಕರು ಮತ್ತು ಮುಖಂಡರ ಬಳಿ ಮಾಹಿತಿ ಪಡೆದು ಬಳಿಕ ಟಿಕೆಟ್ ಕೊಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಎಲ್.ಕೆ. ಅಡ್ವಾಣಿಗೆ ಭಾರತ ರತ್ನ ಘೋಷಣೆ: ಪ್ರಧಾನಿ ಮೋದಿ ಅಭಿನಂದನೆ

Last Updated : Feb 3, 2024, 6:32 PM IST

ABOUT THE AUTHOR

...view details