ಕರ್ನಾಟಕ

karnataka

ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಆದೇಶ

By ETV Bharat Karnataka Team

Published : Feb 8, 2024, 8:08 PM IST

ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳಪೆ ಕಾಮಗಾರಿ ಹಾಗೂ ಅವ್ಯವಹಾರ ನಡೆದಿದೆ ಎಂಬ ಬಗ್ಗೆ ದೂರು ಕೇಳಿಬಂದಿತ್ತು. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆದೇಶ ಹೊರಡಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಫೆ.2ರಂದು ಬರೆದ ಪತ್ರದಲ್ಲಿ, ಬೈಲೂರಿನಲ್ಲಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದಿದೆ ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ/ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ವಿವಿಧ ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿವೆ. ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಿಐಡಿ ಅಥವಾ ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುಂತೆ ಕೋರಿದ್ದಾರೆ. ಆದ್ದರಿಂದ ಕೂಡಲೇ ವಿಷಯವನ್ನು ಸಿಐಡಿ ವತಿಯಿಂದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್

ಬೇಗ ತನಿಖೆ ಪೂರ್ಣಗೊಳಿಸಿ-ಸುನೀಲ್ ಕುಮಾರ್:ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳ ಕುರಿತು ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ಸ್ವಾಗತಿಸುತ್ತೇನೆ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಬೇಕು ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.

ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ. ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಸುನೀಲ್ ಕುಮಾರ್ ಇದೇ ವೇಳೆ ಪತ್ರಿಕಾ ಹೇಳಿಕೆ ಮೂಲಕ ವಿಶೇಷ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ:ಉಡುಪಿಯ ಪರಶುರಾಮ ಥೀಮ್ ಪಾರ್ಕ್ ಪ್ರಶ್ನಿಸಿ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಜಾ

ABOUT THE AUTHOR

...view details