ಕರ್ನಾಟಕ

karnataka

ಮುಡಾ ಆಯುಕ್ತ ಮನ್ಸೂರ್ ಅಲಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಣೆ - MUDA Commissioner

By ETV Bharat Karnataka Team

Published : Apr 5, 2024, 10:27 PM IST

25 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಆಯುಕ್ತ ಮನ್ಸೂರ್ ಅಲಿ ಇತ್ತೀಚೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

Court refusal to grant bail
ಜಾಮೀನು ನೀಡಲು ನ್ಯಾಯಾಲಯ ನಿರಾಕರಣೆ

ಮಂಗಳೂರು(ದಕ್ಷಿಣ ಕನ್ನಡ):25 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಮನ್ಸೂರ್ ಅಲಿ ಅವರಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಮಾ.23ರಂದು ಮುಡಾ ಆಯುಕ್ತ ಮನ್ಸೂರ್ ಅಲಿಯ ನಿರ್ದೇಶನದಂತೆ ಬ್ರೋಕರ್ ಮಹಮ್ಮದ್ ಸಲಿಂ ಎಂಬಾತ 25 ಲಕ್ಷ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 03/2024 ಕಲಂ 7(ಎ) ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ, 2018) ರಡಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ದಸ್ತಗಿರಿ ಮಾಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಏಪ್ರಿಲ್ 8ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಬಳಿಕ ಮುಡಾ ಆಯುಕ್ತ ಮನ್ಸೂರ್ ಅಲಿ ಮತ್ತು ಬ್ರೋಕರ್ ಮಹಮ್ಮದ್ ಸಲಿಂ ನ್ಯಾಯಾಲಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಎಸ್ ವಿಚಾರಣೆ ನಡೆಸಿ, ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದಾರೆ.

ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಜಮೀನು ಒತ್ತುವರಿ ಮಾಡಿ ಶಾಲೆ ನಿರ್ಮಾಣ: ನೋಟಿಸ್ ಜಾರಿ ಮಾಡಿದ ಹೈಕೋರ್ಟ್ - High Court Notice

ABOUT THE AUTHOR

...view details