ಕರ್ನಾಟಕ

karnataka

ಸ್ತನ, ಓರಲ್ ಕ್ಯಾನ್ಸರ್​ನ ಉಚಿತ ತಪಾಸಣೆಗೆ ಆರೋಗ್ಯ ಇಲಾಖೆಯಿಂದ ಸಹಕಾರ: ದಿನೇಶ್ ಗುಂಡೂರಾವ್

By ETV Bharat Karnataka Team

Published : Feb 18, 2024, 3:12 PM IST

ಆರೋಗ್ಯ ಇಲಾಖೆಯ ಕೆಲಸಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ.

Health Department programs
ಉಚಿತ ತಪಾಸಣೆಗೆ ಆರೋಗ್ಯ ಇಲಾಖೆಯಿಂದ ಸಹಕಾರ

ಬೆಂಗಳೂರು: ಕ್ಯಾನ್ಸರ್ ತಪಾಸಣೆ ಮಾಡಿಕೊಳ್ಳುವುದು ಉತ್ತಮ ಕ್ರಮವಾಗಿದೆ. ಮಹಿಳೆಯರಿಗೆ ಸ್ತನ ಮತ್ತು ಓರಲ್ ಕ್ಯಾನ್ಸರ್​ನ ಉಚಿತ ತಪಾಸಣೆ ಮಾಡಿಸಿಕೊಳ್ಳಲು ಆರೋಗ್ಯ ಇಲಾಖೆಯಿಂದ ಸಹಕಾರ ನೀಡಲಾಗುತ್ತಿದೆ. ಮೊದಲನೆ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ, ಚಿಕಿತ್ಸೆ ಕಡಿಮೆ ವೆಚ್ಚದಾಯಕವಾಗಿರುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಉಚಿತ ತಪಾಸಣೆಗೆ ಆರೋಗ್ಯ ಇಲಾಖೆಯಿಂದ ಸಹಕಾರ

ನಗರದ ರಾಹುಲ್​ ಗಾಂಧಿ ಅಭಿಮಾನಿಗಳ ವೇದಿಕೆ - ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವತಿಯಿಂದ ಇಂದು ಕುರುಬರಹಳ್ಳಿ ಬಯಲು ರಂಗಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ರಕ್ತ ಪರೀಕ್ಷೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮನುಷ್ಯರು ಆರೋಗ್ಯವಂತರಾಗಿರಲು ಆರೋಗ್ಯ ತಪಾಸಣೆಯ ಅವಶ್ಯಕತೆ ಇದೆ. ಜನರು ಭಯಪಡದೇ ವೈದ್ಯಕೀಯ ತಪಾಸಣೆಯನ್ನು ಸಕಾಲಕ್ಕೆ ಮಾಡಿಸಿಕೊಂಡು, ನ್ಯೂನತೆ ಇದ್ದರೆ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ ಆರೋಗ್ಯಕ್ಕೆ ಅವಶ್ಯವಾಗಿದೆ ಎಂದು ಸಲಹೆ ನೀಡಿದರು.

ಉಚಿತ ತಪಾಸಣೆಗೆ ಆರೋಗ್ಯ ಇಲಾಖೆಯಿಂದ ಸಹಕಾರ

ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿ ಯೋಜನೆ ಜನರಿಗೆ ಸಹಕಾರಿಯಾಗಿದೆ. ಆಶಾಕಿರಣ ಕಾರ್ಯಕ್ರಮ ಯೋಜನೆ ಕೂಡ ಜಾರಿಗೆ ತರಲಾಗುತ್ತಿದೆ. ಈವರೆಗೆ 1 ಕೋಟಿ ಜನರಿಗೆ ತಪಾಸಣೆ ಮಾಡಿಸಲಾಗಿದೆ. ಕರ್ನಾಟಕದ ಸಮಸ್ತ ಜನರಿಗೆ ಕಣ್ಣಿನ ತಪಾಸಣೆ ಮಾಡಿ, ಅವಶ್ಯಕತೆ ಇರುವವರಿಗೆ ಕನ್ನಡಕ ವಿತರಿಸುವ ಯೋಚನೆ ಸರ್ಕಾರಕ್ಕಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳಿಗೆ ಆರೋಗ್ಯ ಇಲಾಖೆಯ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದರು.

ಉಚಿತ ತಪಾಸಣೆಗೆ ಆರೋಗ್ಯ ಇಲಾಖೆಯಿಂದ ಸಹಕಾರ

ಕಾಂಗ್ರೆಸ್ ಮುಖಂಡ ಸಲೀಮ್ ಅಹಮದ್ ಮಾತನಾಡಿ, ಕಾಂಗ್ರೆಸ್ ಸರ್ಕಾರ 9 ತಿಂಗಳಿನಲ್ಲಿ ಜನರ ವಿಶ್ವಾಸ ಗಳಿಸಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲಾಗಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಸಿದ್ಧಾಂತದ ಮೇಲೆ ಸರ್ಕಾರ ನಡೆಯುತ್ತಿದೆ ಎಂದು ಹೇಳಿದರು.

ಬಿಬಿಎಂಪಿಯ ಎಸ್. ಕೇಶವಮೂರ್ತಿ ಮಾತನಾಡಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಕುಟುಂಬದ ಆಶೀರ್ವಾದ ನನ್ನ ಮೇಲಿದೆ. ಅವರ ಪ್ರೇರಣೆಯಿಂದ ಬಡವರಿಗೆ ಉತ್ತಮ ಆರೋಗ್ಯ ಸೇವೆ ಲಭಿಸಬೇಕು ಎಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 5ಗ್ಯಾರಂಟಿ ಯೋಜನೆಗಳನ್ನು ಪ್ರತಿ ಕುಟುಂಬಗಳಿಗೆ ತಲುಪಿಸಲಾಗಿದೆ ಎಂದು ಹೇಳಿದರು.

ಉಚಿತ ತಪಾಸಣೆಗೆ ಆರೋಗ್ಯ ಇಲಾಖೆಯಿಂದ ಸಹಕಾರ

ಇದನ್ನೂ ಓದಿ:ಬೆಂಗಳೂರಲ್ಲಿ ಚಾಲಕ ರಹಿತ ಮೆಟ್ರೋ: ಹಳಿಗಳ ಮೇಲೆ ಬೋಗಿಗಳ ಜೋಡಣೆ - Photo

ಪಾಲಿಕೆಯ ಆಡಳಿತ ಪಕ್ಷದ ಮಾಜಿ ನಾಯಕ ಎಮ್. ಶಿವರಾಜು ಮಾತನಾಡಿ, ನಮ್ಮ ವಾರ್ಡ್, ನಮ್ಮ ಜನ ಆರೋಗ್ಯವಂತರಾಗಿ ಇರಬೇಕು ಎನ್ನುವ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಜನರ ಆರೋಗ್ಯದ ಹಿತರಕ್ಷಣೆಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್.ಎಸ್. ಮಂಜುನಾಥಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ರಾಜ್ಯದ ಜನತೆ ಬಹಳ ಸಂತೋಷದಿಂದ ಇದ್ದಾರೆ. ಆರೋಗ್ಯ ಎಲ್ಲರಿಗೂ ಮುಖ್ಯ. ಆದ್ದರಿಂದ ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಮಹತ್ವಪೂರ್ಣ ಯೋಜನೆಗಳನ್ನು ಜಾರಿಗೆ ತಂದು ಸಾಮಾನ್ಯ ಜನರಿಗೆ ಉಚಿತವಾಗಿ ಆರೋಗ್ಯ ಸೇವೆ ನೀಡುತ್ತಿದೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ರಾಮಕೃಷ್ಣ, ಎಂ.ಜಿ.ಸುಧೀಂದ್ರ, ನಟರಾಜ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ABOUT THE AUTHOR

...view details