ಕರ್ನಾಟಕ

karnataka

ಶಿರಸಿ: ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು - five injured in car accident

By ETV Bharat Karnataka Team

Published : Apr 9, 2024, 10:54 PM IST

ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರು ಹರಿದ ಘಟನೆ ಶಿರಸಿ - ಕುಮಟಾ ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ನಡೆದಿದೆ.

five injured in car accident in sirsi
ಶಿರಸಿ: ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು

ಶಿರಸಿ(ಉತ್ತರ ಕನ್ನಡ): ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರು ಹರಿದ ಘಟನೆ ಜಿಲ್ಲೆಯ ಶಿರಸಿ - ಕುಮಟಾ ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಒಬ್ಬ ಮಗು ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರು ಹೈದರಾಬಾದ್ ಮೆಹಬೂಬನಗರದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇನ್ನು ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details