ಕರ್ನಾಟಕ

karnataka

ಸ್ವಲ್ಪ ತಾಳ್ಮೆಯಿಂದ ಇದ್ದರೆ ಹಣ ಬಿಡುಗಡೆಯಾಗಲಿದೆ: ಕಾಂಗ್ರೆಸ್ ಪ್ರತಿಭಟನೆಗೆ ಬಿಎಸ್​ವೈ ತಿರುಗೇಟು - BSY REACTS ON CONGRESS PROTEST

By ETV Bharat Karnataka Team

Published : Apr 24, 2024, 1:23 PM IST

ಸ್ವಲ್ಪ ತಾಳ್ಮೆಯಿಂದ ಇದ್ದರೆ ಹಣ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಬಿಎಸ್​ವೈ ಕಾಂಗ್ರೆಸ್ ಪ್ರತಿಭಟನೆಗೆ ತಿರುಗೇಟು ನೀಡಿದರು.

ಮಾಜಿ ಸಿಎಂ ಬಿಎಸ್​ವೈ
ಮಾಜಿ ಸಿಎಂ ಬಿಎಸ್​ವೈ

ಬೆಂಗಳೂರು: ಕರ್ನಾಟಕ ಸೇರಿ ಎಲ್ಲ ರಾಜ್ಯಗಳಿಗೂ ಕೇಂದ್ರ ನ್ಯಾಯಬದ್ಧವಾಗಿ ಪರಹಾರ ಕೊಡಲಿದೆ, ಕಾಂಗ್ರೆಸ್​ನವರು ಸ್ವಲ್ಪ ತಾಳ್ಮೆಯಿಂದ ಇದ್ದರೆ ಹಣ ಬಿಡುಗಡೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಂಗ್ರೆಸ್ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿ ತುಮಕೂರು ಪ್ರವಾಸಕ್ಕೂ ಮುನ್ನ ಮಾತನಾಡಿದ ಅವರು, ಕೇಂದ್ರದ ವಿರುದ್ಧ ಕಾಗ್ರೆಸ್ ಪ್ರತಿಭಟನೆ ಮಾಡಿದ್ದಕ್ಕೆ ವಾಗ್ದಾಳಿ ನಡೆಸಿದರು. ಆವತ್ತಿಂದಲೂ ಇವತ್ತಿನವರೆಗೂ ಕಾಂಗ್ರೆಸ್​ನವರು ಅದೇ ಮಾತಾಡುತ್ತಿದ್ದಾರೆ. ಪರಿಹಾರದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಎಲ್ಲ ರಾಜ್ಯಗಳಿಗೂ ನ್ಯಾಯಬದ್ಧವಾಗಿ ಪರಿಹಾರ ಕೊಡ್ತೇವೆ ಅಂತ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹ ಇದನ್ನೇ ಹೇಳಿದ್ದಾರೆ. ಕಾಂಗ್ರೆಸ್​ನವರು ಸ್ವಲ್ಪ ತಾಳ್ಮೆಯಿಂದ ಇದ್ದರೆ, ಹಣವೂ ಬಿಡುಗಡೆ ಆಗುತ್ತದೆ, ಕೆಲಸ ಸಹ ಮಾಡಬಹುದು ಎಂದರು.

ರಾಜ್ಯದಲ್ಲಿ ಬರಗಾಲ ಇರುವುದು ನಿಜ, ಇಂತಹ ಭೀಕರ ಬರಗಾಲ ಇದ್ದಾಗ ಸಹಜವಾಗಿ ಪರಿಹಾರ ಕೊಡುತ್ತಾರೆ. ಪರಿಹಾರ ಬರುವುದಕ್ಕೆ ಸ್ಪಲ್ಪ ವಿಳಂಬ ಆಗಬಹುದು ಅಷ್ಟೇ. ಪರಿಹಾರ ತರಲು ನಾವೂ ಪ್ರಯತ್ನ ಮಾಡುತ್ತೇವೆ ಎಂದು ಬಿಎಸ್​ವೈ ಹೇಳಿದರು.

ರಾಜ್ಯದಲ್ಲಿನ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಇಂದು ಕಡೆಯ ದಿನವಾಗಿದೆ. ಇವತ್ತು ವಿ ಸೋಮಣ್ಣ ಕ್ಷೇತ್ರಕ್ಕೆ ತಿಪಟೂರಿಗೆ ಹೋಗುತ್ತಿದ್ದೇನೆ. ಅಲ್ಲಿ ಎರಡು ಕಾರ್ಯಕ್ರಮ ಮುಗಿಸಿ ನಂತರ ಎರಡನೇ ಹಂತದ ಚುನಾವಣೆ ನಡೆಯಲಿರುವ ಶಿವಮೊಗ್ಗ ಕ್ಷೇತ್ರಕ್ಕೆ ತೆರಳಲಿದ್ದೇನೆ. ತವರು ಜಿಲ್ಲೆಯ ಶಿಕಾರಿಪುರಕ್ಕೆ ಭೇಟಿ ನೀಡಿ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಲಿದ್ದೇನೆ, ಅದೇ ರೀತಿ ನಾಳೆ ಬೀದರ್ ಭಾಗದಲ್ಲಿ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: ಬರ ಪರಿಹಾರ ಕೊಟ್ಟು ಕರ್ನಾಟಕಕ್ಕೆ ಬನ್ನಿ, ಇಲ್ಲವಾದರೆ ಮತ ಕೇಳುವ ನೈತಿಕತೆ ಇಲ್ಲ: ಕೇಂದ್ರದ ವಿರುದ್ಧ ಸಿಎಂ ಗರಂ - Congress Protest

ABOUT THE AUTHOR

...view details