ಕರ್ನಾಟಕ

karnataka

ರಾಜ್ಯದಲ್ಲಿ ಬಿಸಿಗಾಳಿ ತೀವ್ರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್ - Heatwave Alert

By ETV Bharat Karnataka Team

Published : May 1, 2024, 4:12 PM IST

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಗಾಳಿ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ನೀಡಿದೆ.

RED ALERT FOR 6 DISTRICTS  HEAT WAVE  INCREASE  BENGALURU
ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು:ರಾಜ್ಯದಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳವರೆಗೆ ಜಿಲ್ಲೆಗಳಿಗೆ ಹವಾಮಾನ ಇಲಾಖೆ ವಿವಿಧ ರೀತಿಯ ಎಚ್ಚರಿಕೆಗಳನ್ನು ನೀಡಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್‌, ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗು ಬಳ್ಳಾರಿ, ವಿಜಯಪುರ, ರಾಯಚೂರು, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಮಳೆ ಮುನ್ಸೂಚನೆ: ಮೇ 4ರಂದು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ. ಮೇ 5ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ 5 ದಿನಗಳವರೆಗೆ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 39 ಡಿಗ್ರಿ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇಂದು ಬೆಂಗಳೂರು ನಗರದಲ್ಲಿ 38.2 ಡಿಗ್ರಿ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ: ಇಂದಿನಿಂದ ಮೂರು ದಿನ ಅಂಚೆ ಮತದಾನ - Postal Voting

ABOUT THE AUTHOR

...view details