ಕರ್ನಾಟಕ

karnataka

ಎಂ.ಜಿ ರಸ್ತೆ- ಬೈಯಪ್ಪನಹಳ್ಳಿ ನಡುವೆ 'ನಮ್ಮ ಮೆಟ್ರೋ' ರೈಲು ಸಂಚಾರ ಪುನಾರಂಭ

By ETV Bharat Karnataka Team

Published : Jan 27, 2024, 11:25 AM IST

Updated : Jan 27, 2024, 2:34 PM IST

ಇಂದು ಬೆಳಗ್ಗೆ ಒಂದು ಗಂಟೆಯ ವರೆಗೆ ಎಂ.ಜಿ ರಸ್ತೆ- ಬೈಯಪ್ಪನಹಳ್ಳಿ ನಡುವೆ 'ನಮ್ಮ ಮೆಟ್ರೋ' ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು.

ನಮ್ಮ ಮೆಟ್ರೊ ರೈಲು ಸಂಚಾರ ಸ್ಥಗಿತ
ನಮ್ಮ ಮೆಟ್ರೊ ರೈಲು ಸಂಚಾರ ಸ್ಥಗಿತ

ಬೆಂಗಳೂರು :ತಾಂತ್ರಿಕ ಸಮಸ್ಯೆಯಿಂದಾಗಿ ಎಂ. ಜಿ. ರಸ್ತೆ- ಬೈಯಪ್ಪನಹಳ್ಳಿ ನಡುವೆ ಸ್ಥಗಿತಗೊಂಡಿದ್ದ ಮೆಟ್ರೊ ರೈಲು ಸಂಚಾರ ಪುನರ್ ಆರಂಭವಾಗಿದೆ. ಒಂದು ಗಂಟೆಯವರೆಗೆ ನೇರಳೆ‌ ಮಾರ್ಗದ ಎರಡು ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸೇವೆ ಲಭ್ಯವಿರಲಿಲ್ಲ. ಇದೀಗ ಎಲ್ಲ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲು ಸಂಚಾರ ನಡೆಯುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಬಿಎಂಆರ್​ಸಿಎಲ್) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಳಗ್ಗೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿತ್ತು. ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಾಗಿ ಬಿಎಂಆರ್​ಸಿಎಲ್ ವಿಷಾದ ವ್ಯಕ್ತಪಡಿಸಿತ್ತು.

ಇದನ್ನೂ ಓದಿ :ಪೀಣ್ಯ-ನಾಗಸಂದ್ರ ನಡುವೆ 3 ದಿನ 'ನಮ್ಮ ಮೆಟ್ರೋ' ರೈಲು ಸಂಚಾರ ಸ್ಥಗಿತ

Last Updated : Jan 27, 2024, 2:34 PM IST

ABOUT THE AUTHOR

...view details