ಕರ್ನಾಟಕ

karnataka

ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕು: ಸತೀಶ್​ ಜಾರಕಿಹೊಳಿ - Hassan Pen Drive Case

By ETV Bharat Karnataka Team

Published : Apr 29, 2024, 9:03 PM IST

Updated : Apr 29, 2024, 10:02 PM IST

ನಾವು ಹಾಸನ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿಲ್ಲ, ಬಳಸಿಕೊಳ್ಳುವುದೂ ಇಲ್ಲ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕು: ಸತೀಶ್​ ಜಾರಕಿಹೊಳಿ
ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕು: ಸತೀಶ್​ ಜಾರಕಿಹೊಳಿ

ಸತೀಶ್​ ಜಾರಕಿಹೊಳಿ

ಹಾವೇರಿ:ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಎಸ್​ಐಟಿ ಮಾಡುತ್ತಿದೆ. ವರದಿ ಬಂದ ಮೇಲೆ ನೋಡೋಣ. ಈಗ ಯಾರ ಮೇಲೂ ಆರೋಪ ಮಾಡಿ ಏನೂ ಪ್ರಯೋಜನವಿಲ್ಲ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಇದನ್ನು ಎಲ್ಲರೂ ಖಂಡಿಸಿದ್ದಾರೆ. ನಾವೂ ಖಂಡಿಸುತ್ತೇವೆ. ಸತ್ಯಾಸತ್ಯತೆ ಹೊರಗೆ ಬರಬೇಕು ಎಂದರೆ ತನಿಖೆ ಪೂರ್ಣಗೊಳ್ಳಬೇಕು ಎಂದು ಹೇಳಿದರು.

ಈ ಪ್ರಕರಣದಲ್ಲಿ ರಾಜಕೀಯ ನಾವು ಮಾಡಬಹುದಿತ್ತು. ಆದರೆ ನಮಗೆ ಅವಶ್ಯಕತೆ ಇಲ್ಲ. ನಾವೇನಿದ್ದರೂ ಅಭಿವೃದ್ಧಿ ಮೇಲೆ ಮತ ಕೇಳುತ್ತೇವೆ. ಬಿಜೆಪಿಗರು ಅವರಿಗೇ ಅವರೇ ಪ್ರಶ್ನೆ ಹಾಕಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಇನ್ನೂ ಎರಡ್ಮೂರು ದಿನ ಇರುತ್ತಾರೆ. ಅವರು ಹಾಸನ ಪ್ರಕರಣದ ಬಗ್ಗೆ ಉತ್ತರ ಕೋಡಬೇಕು ಎಂದು ಒತ್ತಾಯಿಸಿದರು.

ಪ್ರಕರಣದಲ್ಲಿ ಪ್ರಜ್ವಲ್​ ರೇವಣ್ಣ ಅವರನ್ನು ರಾಜ್ಯ ಸರ್ಕಾರ ಸಿಲುಕಿಸಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ನಾವ್ಯಾಕೆ ಸಿಲುಕಿಸುತ್ತೇವೆ?. ಯಾರು ಮಾಡಿದ್ದಾರೆ, ಯಾರು ಮಾಡಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದ್ದು, ಸತ್ಯಾಂಶ ಹೊರಗೆ ಬರುತ್ತದೆ. ಬೇರೆ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಒತ್ತಾಯಿಸಿರಲಿಲ್ಲ. ಹಾಗಾಗಿ ಎಸ್ಐಟಿ ತನಿಖೆಗೆ ಕೊಟ್ಟಿರಲಿಲ್ಲ. ಈ ಪ್ರಕರಣದಲ್ಲಿ ಎಸ್​ಐಟಿ ತನಿಖೆಗೆ ಒತ್ತಾಯಿಸಿದ್ದಾರೆ, ಅದಕ್ಕೆ ಕೊಟ್ಟಿದ್ದೇವೆ. ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಪ್ರಕರಣದ ತನಿಖೆ ಮಾಡಿಸಲು ಸಿದ್ಧರಿದ್ದಾರೆ ಎಂದು ಹೇಳಿದರು.

ಕರಾವಳಿ ಭಾಗದ ನಡೆದ ಪ್ರಕರಣಗಳು ಹಾಗೂ ಇತ್ತೀಚಿಗೆ ಹುಬ್ಬಳ್ಳಿಯ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಲಾಭ ಪಡೆದುಕೊಳ್ಳಲು ಪ್ರಯತ್ನಿಸಿದೆ. ನಾವು ಹಾಸನ ಪ್ರಕರಣವನ್ನು ರಾಜಕೀಯಕ್ಕೆ ಬಳಿಸಿಕೊಳ್ಳುತ್ತಿಲ್ಲ, ಬಳಸಿಕೊಳ್ಳುವುದೂ ಇಲ್ಲ. ಈಗ ಚುನಾವಣೆ ಇರುವ ಕಾರಣ ಅಭ್ಯರ್ಥಿಗಳನ್ನು ಗೆಲ್ಲಿಸಲು ಹೆಚ್ಚು ಒತ್ತು ನೀಡುತ್ತೇವೆ ಎಂದರು.

ಎಸ್​ಟಿ, ಎಸ್​ಸಿಗೆ ಮೀಸಲಾಗಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ ಕುರಿತು ಮಾತನಾಡಿ, ಅಭಿವೃದ್ಧಿಗೆ ಪ್ರತ್ಯೇಕ ಹಣವಿದೆ, ಇನ್ನು ಬಜೆಟ್‌ನಲ್ಲಿ ಅವರಿಗೆ ಪ್ರತ್ಯೇಕವಾಗಿ ಹಣ ಇರಿಸಲಾಗಿದೆ. ಹೀಗಾಗಿ ಅವರ ಹಣ ಬಳಸಿಕೊಳ್ಳುವ ಪ್ರಶ್ನೆಯೇ ಉದ್ಭಾವವಾಗುವುದಿಲ್ಲ ಎಂದ ಅವರು, ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್​ ಸರ್ಕಾರ ಇರುವುದಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆ ಪ್ರತಿಕ್ರಿಯಿಸಿ, 135 ಶಾಸಕರಿದ್ದೇವೆ, ದೊಡ್ಡ ಸಂಖ್ಯೆಯಲ್ಲಿ ಶಾಸಕರಿರುವ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ 15 ರಿಂದ 17 ಕ್ಷೇತ್ರಗಳಲ್ಲಿ ನಾವು ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಒಬ್ಬ ವ್ಯಕ್ತಿಯ ವೈಯಕ್ತಿಕ ಘಟನೆಗಳು ಯಾವ ಅಭ್ಯರ್ಥಿ, ಪಕ್ಷಕ್ಕೂ ಸಂಬಂಧಪಟ್ಟಿಲ್ಲ: ಜಿ‌.ಟಿ.ದೇವೇಗೌಡ - Hassan Pen Drive Case

Last Updated :Apr 29, 2024, 10:02 PM IST

ABOUT THE AUTHOR

...view details