ಕರ್ನಾಟಕ

karnataka

ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ - Crime News

By ETV Bharat Karnataka Team

Published : May 3, 2024, 1:17 PM IST

ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Dharwad  Hale huballi Police  police Investigation Crime News
ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ (ETV Bharat)

ಹುಬ್ಬಳ್ಳಿ:ನಗರದ ಹೊರವಲಯದಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಸುಟ್ಟು ಹಾಕಿರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ನೇಕಾರ ನಗರದ ಚೆಕ್ ಪೋಸ್ಟ್ ಸಮೀಪದ ಬ್ರಿಡ್ಜ್ ಹತ್ತಿರ ಅರ್ಧ ಸುಟ್ಟ ಸ್ಥಿತಿಯಲ್ಲಿ ಅಂದಾಜು 35- 40 ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇಂದು ಬೆಳಿಗ್ಗೆ ದಾರಿಯಲ್ಲಿ ಸಂಚರಿಸುವ ಜನರು ಮೃತದೇಹವನ್ನು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಆಗಮಿಸಿದ್ದಾರೆ. ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಈವರೆಗೆ ಮೃತನ ಮಾಹಿತಿ ದೊರೆತ್ತಿಲ್ಲ. ಸದ್ಯ ಮೃತನ ಕೈ ಮೇಲೆ ಶ್ರೇಯಸ್ ಎಂಬ ಹಚ್ಚೆ ಹಾಕಲಾಗಿದ್ದು, ದೇಹ ಸಂಪೂರ್ಣ ಅರ್ಧ ಸುಟ್ಟು ಹೋಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಯುವತಿಯನ್ನು ಪ್ರೀತಿಸಿ ಕರೆದುಕೊಂಡು ಹೋದ ಆರೋಪ: ಯುವಕನ ತಾಯಿ‌ ಮೇಲೆ ಅಮಾನವೀಯ ಹಲ್ಲೆ, ದೂರು - ಪ್ರತಿದೂರು - Inhuman assault on woman

ABOUT THE AUTHOR

...view details