ಕರ್ನಾಟಕ

karnataka

ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಜೆಡಿಎಸ್ ಶಾಸಕ ಶರಣಗೌಡ ಕಂದಕೂರ

By ETV Bharat Karnataka Team

Published : Feb 27, 2024, 1:46 PM IST

ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಸ್ಪಷ್ಟಪಡಿಸಿದ್ದಾರೆ.

Rajya Sabha Election  JDS MLA Sharanugowda Kandakura  ಜೆಡಿಎಸ್ ಶಾಸಕ ಶರಣುಗೌಡ ಕಂದಕೂರ  ಪಕ್ಷ ಸೂಚಿಸಿದ ಅಭ್ಯರ್ಥಿ
ಜೆಡಿಎಸ್ ಶಾಸಕ ಶರಣುಗೌಡ ಕಂದಕೂರ ಹೇಳಿಕೆ

ಜೆಡಿಎಸ್ ಶಾಸಕ ಶರಣುಗೌಡ ಕಂದಕೂರ ಹೇಳಿಕೆ

ಬೆಂಗಳೂರು: ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಹೇಳುವ ಮೂಲಕ ತಮ್ಮ ಮತದಾನದ ಬಗ್ಗೆ ಇದ್ದ ಗೊಂದಲಕ್ಕೆ ಜೆಡಿಎಸ್ ಶಾಸಕ ಶರಣುಗೌಡ ಕಂದಕೂರ ತೆರೆ ಎಳೆದಿದ್ದಾರೆ. ವಿಧಾನಸೌಧದಲ್ಲಿ ಇಂದು ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ನಮಗೆ ವಿಪ್ ಜಾರಿ ಮಾಡಿದೆ. ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ತಮ್ಮ ಮತದಾನದ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದರು.

ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮುನಿಸಿಕೊಂಡಿದ್ದ ಶರಣುಗೌಡ ಅವರು ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದರು. ಅಧಿವೇಶನಕ್ಕೂ ಸಹ ಗೈರಾಗಿದ್ದರು. ಪಕ್ಷದ ಮುಖಂಡರು ಕಂದಕೂರ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದರು.

ಇನ್ನು ಮತದಾನಕ್ಕೆ ಆಗಮಿಸಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ. ಚಂದ್ರಶೇಖರ್ ಮಾತನಾಡಿದ್ದರು. ಕಂದಕೂರ ಅವರು ಜೆಡಿಎಸ್ ಅಸಮಾಧಾನಿತ ಶಾಸಕರಾಗಿದ್ದು, ಅವರ ನಡೆ ಕುತೂಹಲ ಕೆರಳಿಸಿತ್ತು. ಮತದಾನ ಮಾಡಿ ಹೊರ ಬಂದ ಶರಣುಗೌಡ ಕಂದಕೂರ ಇದಕ್ಕೆಲ್ಲ ತೆರೆ ಎಳೆದರು.

ಓದಿ:ರಾಜ್ಯಸಭೆ ಚುನಾವಣೆಗೆ ಮತದಾನ ಆರಂಭ: ಬಿಜೆಪಿ - ಮೈತ್ರಿ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದ ಆರ್. ಅಶೋಕ್

ABOUT THE AUTHOR

...view details