ಕರ್ನಾಟಕ

karnataka

ದೊಡ್ಡಬಳ್ಳಾಪುರ: ಮಾ.8ರಂದು ರಾಜ್ಯಮಟ್ಟದ ಹಳ್ಳಿಕಾರ್ ರಾಸುಗಳ ಫ್ಯಾಷನ್ ಶೋ

By ETV Bharat Karnataka Team

Published : Feb 11, 2024, 11:39 AM IST

Updated : Feb 11, 2024, 2:10 PM IST

ಸ್ಥಳೀಯ ಹಾಗು ದೇಶೀಯ ತಳಿಯಾಗಿರುವ ಹಳ್ಳಿಕಾರ್ ರಾಸುಗಳನ್ನು ಸಂರಕ್ಷಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರದಲ್ಲಿ ಫ್ಯಾಷನ್ ಶೋ ಆಯೋಜಿಸಲಾಗಿದೆ.

ಹಳ್ಳಿಕಾರ್ ರಾಸುಗಳ ಫ್ಯಾಷನ್ ಶೋ ಆಯೋಜನೆ
ಹಳ್ಳಿಕಾರ್ ರಾಸುಗಳ ಫ್ಯಾಷನ್ ಶೋ ಆಯೋಜನೆ

ರಾಜ್ಯಮಟ್ಟದ ಹಳ್ಳಿಕಾರ್ ರಾಸುಗಳ ಫ್ಯಾಷನ್ ಶೋ

ದೊಡ್ಡಬಳ್ಳಾಪುರ:ಮಹಾಶಿವರಾತ್ರಿ ಪ್ರಯುಕ್ತ ಮಾರ್ಚ್ 8ರಂದು ಘಾಟಿ ಸುಬ್ರಮಣ್ಯ ಕ್ಷೇತ್ರದ ಸಮೀಪ ಹಳ್ಳಿಕಾರ್ ರಾಸುಗಳ ಫ್ಯಾಷನ್ ಶೋ ಆಯೋಜನೆ ಮಾಡಲಾಗಿದೆ. ದೇಶಿ ರಾಸುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗು ಯುವ ಪೀಳಿಗೆಯ ಯುವಕರನ್ನು ಹಸುಗಳ ಪಾಲನೆ-ಪೋಷಣೆಯಲ್ಲಿ ತೊಡಗಿಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದ ಯಾವುದೇ ಭಾಗದ ರೈತರು ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಈ ಬಗ್ಗೆ ಶನಿವಾರ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಾಲಯದ ಸನ್ನಿಧಿಯಲ್ಲಿ ನವ ಕರ್ನಾಟಕ ಯುವಶಕ್ತಿ ವೇದಿಕೆಯಿಂದ ಪತ್ರಿಕಾಗೋಷ್ಠಿ ನಡೆಯಿತು.

ನವ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಮಾತನಾಡಿ, "ಮಹಾಶಿವರಾತ್ರಿ ಅಂಗವಾಗಿ ಹಳ್ಳಿಕಾರ್ ಹಸುಗಳ ಫ್ಯಾಶನ್ ಶೋ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. ಈ ಕಾರ್ಯಕ್ರಮದ ಮೂಲಕ ಹಳ್ಳಿಕಾರ್ ತಳಿಯ ಸೌಂದರ್ಯ ಮತ್ತು ಸಾಂಸ್ಕೃತಿಕ ಮಹತ್ವವನ್ನು ಪ್ರದರ್ಶಿಸುವ ಗುರಿ ಹೊಂದಿದ್ದೇವೆ. ಸ್ಥಳೀಯ ತಳಿಗಳನ್ನು ಸಂರಕ್ಷಿಸುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ" ಎಂದರು.

ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ, "ಹಳ್ಳಿಕಾರ್ ಹಸುಗಳ ಸೌಂದರ್ಯ ಸ್ಪರ್ಧೆಯ ನಿಯಮಗಳು ಮತ್ತು ಬಹುಮಾನ ಆಯ್ಕೆ ವಿಧಾನಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ರೈತ ಮುಖಂಡರು ಸಹಕಾರ ನೀಡಬೇಕು" ಎಂದು ಮನವಿ ಮಾಡಿದರು.

"ನವ ಕರ್ನಾಟಕ ಯುವಶಕ್ತಿ ವೇದಿಕೆಯು ರೈತರ ಕಲ್ಯಾಣಕ್ಕಾಗಿ ಮತ್ತು ಕನ್ನಡ ಭಾಷೆ-ಸಂಸ್ಕೃತಿಯನ್ನು ಉತ್ತೇಜಿಸಲು ಶ್ರಮಿಸುತ್ತಿರುವ ಯುವ ಸಂಘಟನೆ. ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಯುವಕರು ತೊಡಗಿಕೊಳ್ಳಲು ಇದು ಉತ್ತಮ ವೇದಿಕೆ" ಎಂದು ವೇದಿಕೆಯ ಮಾರ್ಗದರ್ಶಕ ಅಪ್ಪಯ್ಯಣ್ಣ ಹೇಳಿದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಪ್ಪಯಣ್ಣ, ಹಾಡೋನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ಮುನೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಪ್ಪ, ನವ ಕರ್ನಾಟಕ ಯುವಶಕ್ತಿ ವೇದಿಕೆಯ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಪದಾಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಪುತ್ತೂರು: ಗೋ ವಿಹಾರ ಧಾಮದಲ್ಲಿ ಗೋಲೋಕೋತ್ಸವ; ಜನರನ್ನು ಆಕರ್ಷಿಸಿದ ದೇಶಿ ತಳಿಗಳ ಪ್ರದರ್ಶನ

Last Updated : Feb 11, 2024, 2:10 PM IST

ABOUT THE AUTHOR

...view details