ಕರ್ನಾಟಕ

karnataka

ಚಿಕ್ಕಮಗಳೂರು: ಹುಲಿ ಕೊಂದ ಆರೋಪಿಯನ್ನು ನ್ಯಾಯಾಲಯದ ಬಳಿ ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ - TIGER KILLING CASE

By ETV Bharat Karnataka Team

Published : May 1, 2024, 7:51 PM IST

ಹುಲಿ ಕೊಂದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನ್ಯಾಯಾಲಯದ ಬಳಿ ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

FOREST DEPARTMENT  COURT  ACCUSED ARREST  CHIKKAMAGALURU
ಹುಲಿ ಕೊಂದ ಆರೋಪಿಯನ್ನು ನ್ಯಾಯಾಲಯದ ಬಳಿ ವಶಕ್ಕೆ ಪಡೆದ ಅರಣ್ಯ ಇಲಾಖೆ

ಚಿಕ್ಕಮಗಳೂರು:ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ, ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಕುಂಡ್ರ ಗ್ರಾಮದ ಸುರೇಶ್​ನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೂಡಿಗೆರೆ ನ್ಯಾಯಾಲಯದ ಸಮೀಪ ಸುರೇಶ್​ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕುಂಡ್ರ ಎಂಬಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಸಂಬಂಧ ಮೂಡಿಗೆರೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾಗಿದ್ದ ಸುರೇಶ್ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ. ಆತನ ಬಂಧನಕ್ಕೆ ಅರಣ್ಯ ಇಲಾಖೆ ಹುಡುಕಾಟ ನಡೆಸಿತ್ತು.

ಸುರೇಶ್ ಮೂಡಿಗೆರೆ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಾನೆ ಎಂಬ ಖಚಿತ ಮಾಹಿತಿ ಅರಣ್ಯ ಇಲಾಖೆಗೆ ಸಿಕ್ಕಿತ್ತು. ಹೀಗಾಗಿ ಮೂಡಿಗೆರೆ ನ್ಯಾಯಾಲಯದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಹರೆ ಹಾಕಿದ್ದರು. ಇಂದು ಸಂಜೆ ಸುಮಾರು 5 ಗಂಟೆಯ ಸಮಯದಲ್ಲಿ ಸುರೇಶ್​ನನ್ನು ನ್ಯಾಯಾಲಯದ ಸಮೀಪ ವಶಕ್ಕೆ ಪಡೆಯಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದು ಮೂಡಿಗೆರೆ ನ್ಯಾಯಾಲಯದಲ್ಲಿ ನ್ಯಾಯಾದೀಶರ ಎದುರು ಹಾಜರುಪಡಿಸಿದ್ದು, ನ್ಯಾಯಾದೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಆರು ಮಂದಿ ಬಂಧನವಾದಂತಾಗಿದೆ.

ಈಗಾಗಲೇ ಬಂಧಿಸಲ್ಪಟ್ಟಿದ್ದ ಐವರು ಆರೋಪಿಗಳು ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಪ್ರಕರಣದ ಆರೋಪಿಯೊಬ್ಬ ಹುಲಿ ಹತ್ಯೆಯ ಬಗ್ಗೆ ಎಳೆ ಎಳೆಯಾಗಿ ಮಾತನಾಡಿರುವ ವಿಡಿಯೋ ರೆಕಾರ್ಡ್ ಆಗಿದೆ. ಆ ವಿಡಿಯೋದಲ್ಲಿ ಕುಂಡ್ರ ಸುರೇಶ್​ ಹುಲಿಯನ್ನು ಬಂದೂಕಿನಿಂದ ಹೊಡೆದಿದ್ದಾನೆ ಎಂದು ಹೇಳಿದ್ದಾನೆ ಎನ್ನಲಾಗಿದೆ. ಈ ಪ್ರಕರಣವನ್ನು ಅರಣ್ಯ ಇಲಾಖೆ ಗಂಭೀರವಾಗಿ ತನಿಖೆ ನಡೆಸಿ ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕಾಳಜಿ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಓದಿ:ಮೇ 4 ರಂದು ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತಬೇಟೆ - Lok Sabha Election 2024

ABOUT THE AUTHOR

...view details