ಕರ್ನಾಟಕ

karnataka

ಲೋಕಸಭೆ ಸಮರ: ಮೊದಲ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆ - LOK SABHA ELECTION NOMINATION

By ETV Bharat Karnataka Team

Published : Mar 28, 2024, 10:58 PM IST

ಲೋಕಸಭೆ ಚುನಾವಣೆಗೆ ರಾಜ್ಯಾದ್ಯಂತ ಇಂದು ವಿವಿಧ ಪಕ್ಷಗಳ 25 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

nominations for lok sabha election
ಲೋಕಸಭೆ ಸಮರ: ಮೊದಲ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆ

ಬೆಂಗಳೂರು :ಲೋಕಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಚುನಾವಣಾ ಕಾವು ಏರತೊಡಗಿದೆ. ಮೊದಲ ಹಂತದ 14 ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನವೇ 25 ಅಭ್ಯರ್ಥಿಗಳು 29 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌, ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಸೇರಿದಂತೆ 25 ಅಭ್ಯರ್ಥಿಗಳು 29 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. 23 ಪುರುಷರು, ಇಬ್ಬರು ಮಹಿಳೆಯರು ಸೇರಿ 25 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಸಲ್ಲಿಕೆಯಾದ 29 ನಾಮಪತ್ರಗಳ ಪೈಕಿ 26 ಪುರುಷರ ಮತ್ತು ಮೂರು ಮಹಿಳೆಯರ ನಾಮಪತ್ರಗಳಾಗಿವೆ. ಆಡಳಿತರೂಢ ಕಾಂಗ್ರೆಸ್‌ 2, ಪ್ರತಿಪಕ್ಷ ಬಿಜೆಪಿ 1, ಜೆಡಿಎಸ್‌ ಮತ್ತು ಬಿಎಸ್‌ಪಿ ತಲಾ 1, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳು 16, ಪಕ್ಷೇತರರಿಂದ 8 ನಾಮಪತ್ರಗಳು ಸಲ್ಲಿಕೆ ಆಗಿವೆ.

ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಒಟ್ಟು 5 ಅಭ್ಯರ್ಥಿಗಳಿಂದ 6 ಉಮೇದುವಾರಿಕೆ ಸಲ್ಲಿಕೆಯಾಗಿದ್ದು, ನಾಲ್ವರು ಪುರುಷರು, ಒಬ್ಬರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳಿಂದ 4, ಪಕ್ಷೇತರರಿಂದ 2 ನಾಮಪತ್ರಗಳಿವೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳು ಮೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ ಮೂರು ಉಮೇದುವಾರಿಕೆಗಳು ಸಲ್ಲಿಕೆಯಾಗಿವೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳಿಂದ 2 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ 1 ಮತ್ತು ಪಕ್ಷೇತರರಿಂದ 1 ಉಮೇದುವಾರಿಕೆ ಸಲ್ಲಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯಿಂದ 2 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಕಾಂಗ್ರೆಸ್‌ನಿಂದ 2 ಉಮೇದುವಾರಿಕೆ ಸಲ್ಲಿಕೆಯಾಗಿವೆ.

ಚಾಮರಾಜನಗರ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯಿಂದ 1 ನಾಮಪತ್ರ ಸಲ್ಲಿಕೆಯಾಗಿದ್ದು, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ ಸಲ್ಲಿಕೆಯಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಿಂದ 1 ಉಮೇದುವಾರಿಕೆ ಸಲ್ಲಿಸಲಾಗಿದೆ. ಚಿತ್ರದುರ್ಗ ಕ್ಷೇತ್ರದಲ್ಲಿ ಯಾವುದೇ ಉಮೇದುವಾರಿಕೆ ಸಲ್ಲಿಕೆಯಾಗಿಲ್ಲ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳಿಂದ 2 ನಾಮಪತ್ರ ಸಲ್ಲಿಕೆಯಾಗಿವೆ. ಬಿಜೆಪಿ ಮತ್ತು ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ ತಲಾ ಒಂದೊಂದು ಉಮೇದುವಾರಿಕೆ ಸಲ್ಲಿಕೆಯಾಗಿವೆ. ಹಾಸನ ಕ್ಷೇತ್ರದಲ್ಲಿ ಮೂವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಜೆಡಿಎಸ್‌, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿಯಿಂದ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿವೆ.

ಕೋಲಾರ ಕ್ಷೇತ್ರದಲ್ಲಿ ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ 1 ನಾಮಪತ್ರ ಸಲ್ಲಿಕೆಯಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಇಬ್ಬರು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದು, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷ ಮತ್ತು ಪಕ್ಷೇತರರಿಂದ ತಲಾ ಒಂದೊಂದು ಉಮೇದುವಾರಿಕೆ ಸಲ್ಲಿಸಲಾಗಿದೆ. ಮೈಸೂರು ಕ್ಷೇತ್ರದಲ್ಲಿ ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದ ಇಬ್ಬರು ಅಭ್ಯರ್ಥಿಗಳು ಮೂರು ನಾಮಪತ್ರ ಸಲ್ಲಿಸಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಇಬ್ಬರು ಪಕ್ಷೇತರರಿಂದ 2 ಉಮೇದುವಾರಿಕೆ ಸಲ್ಲಿಕೆ ಮಾಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಎಸ್‌ಪಿಯಿಂದ 1 ನಾಮಪತ್ರ ಸಲ್ಲಿಸಲಾಗಿದೆ.

ಇದನ್ನೂ ಓದಿ:ಡಿಸೆಂಬರ್ ಅಂತ್ಯದೊಳಗೆ ರಾಜ್ಯ ಸರ್ಕಾರ ಪತನ ಆಗಲಿದೆ: ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ - Lok Sabha Election 2024

ABOUT THE AUTHOR

...view details