ಕರ್ನಾಟಕ

karnataka

ನಾಡ ಗೀತೆ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

By ETV Bharat Karnataka Team

Published : Feb 22, 2024, 9:12 PM IST

ಮೈಸೂರು ನಗರ ಹೊರವಲಯದ ಹಂಚ್ಯಾ ಗ್ರಾಮದಲ್ಲಿ ನಡೆದ ಪುನರ್ ನಿರ್ಮಾಣ ಶ್ರೀ ಲಕ್ಷ್ಮಿ ದೇವಮ್ಮ, ಆಂಜನೇಯ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ದಂಪತಿ ಭಾಗವಹಿಸಿ ಹೋಮ ಹವನ ಪೂಜೆ ನೆರವೇರಿಸಿದರು.

Vijayendra couple performed homa puja
ಹಂಚ್ಯಾ ಗ್ರಾಮದ ದೇವಾಲಯ ಕಾರ್ಯಕ್ರಮದಲ್ಲಿ ವಿಜಯೇಂದ್ರ ದಂಪತಿ ಹೋಮ ಪೂಜೆ ನೆರವೇರಿಸಿದರು

ಹೋಮ ಹವನ ಪೂಜೆ ನೆರವೇರಿಸಿದ ವಿಜಯೇಂದ್ರ ದಂಪತಿ

ಮೈಸೂರು:ನಗರ ಹೊರವಲಯದಲ್ಲಿ ಹಂಚ್ಯಾ ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಲಕ್ಷ್ಮಿ ದೇವಮ್ಮ, ಆಂಜನೇಯ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ದಂಪತಿ ಭಾಗವಹಿಸಿ, ಹೋಮ ಹವನ ಪೂಜೆ ನೆರವೇರಿಸಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ಹೋಮದಲ್ಲಿ ಕುಳಿತು ವಿಜಯೇಂದ್ರ ದಂಪತಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ವಿಜಯೇಂದ್ರ ಭೇಟಿ ನೀಡಿ, ಚಾಮರಾಜನಗರ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ವಿಜಯೇಂದ್ರ ಅವರು, ''ರಾಜ್ಯ ಸರ್ಕಾರದ ಬಳಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗದಷ್ಟು ಕಷ್ಟವಾದ ಪರಿಸ್ಥಿತಿ ಬಂದಿದೆ. ಶ್ರೀಮಂತ ದೇವಾಲಯಗಳಿಗೆ ಸರ್ಕಾರ ಕನ್ನ ಹಾಕಲು ಮುಂದಾಗಿದೆ. ದೇವಾಲಯಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ, ದಾನಿಗಳು ಅಲ್ಲಿಗೆ ಬಂದು ದಾನ ಮಾಡುತ್ತಾರೆ. ಈ ಸರ್ಕಾರಕ್ಕೆ 224 ಕ್ಷೇತ್ರಗಳಿಗೆ ಒಂದು ರೂಪಾಯಿ ಕೊಡಲು ಆಗುತ್ತಿಲ್ಲ. ರಾಜ್ಯದ ಹಣೆಬರಹ ಹೇಗಿದೆ ನೋಡಿ'' ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಆತಂಕದಲ್ಲಿದೆ : ''ನಾಡಗೀತೆ ವಿಚಾರದಲ್ಲಿ ಸರ್ಕಾರದ ಅಜೆಂಡಾ ಏನು ಎಂಬುದು ಈ ಆದೇಶಗಳಿಂದ ಗೊತ್ತಾಗುತ್ತದೆ. ಇದರಿಂದ ರಾಜ್ಯ ಸರ್ಕಾರ ಕನ್ನಡ ವಿರೋಧಿ ನೀತಿಯ ಚಿಂತನೆಯಲ್ಲಿದೆ. ಕನ್ನಡ ನಾಡ-ನುಡಿಗೆ ಸಿಎಂ ಧಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ ಪ್ರಕಾರ ರಾಜ್ಯದಲ್ಲಿ ಬರ ಪರಿಸ್ಥಿತಿ ಇಲ್ಲ ಎಂಬ ಭ್ರಮೆಯಲ್ಲಿ ಸಿಎಂ ಇದ್ದಾರೆ. ಲೋಕಸಭಾ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಆತಂಕದಲ್ಲಿದೆ. ದೆಹಲಿ ಚಲೋ ನಾಟಕ ಮಾಡಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕುರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಕುಮಾರಸ್ವಾಮಿ ದೆಹಲಿಗೆ ಹೋಗಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿಯಿಂದ ಕೆಲವರು ಕಾಂಗ್ರೆಸ್ ಸೇರುವ ವಿಚಾರವೂ ಗೊತ್ತಿಲ್ಲ, ಊಹಾಪೋಹಗಳಿಗೆ ಉತ್ತರ ನೀಡುವುದಿಲ್ಲ'' ಎಂದು ಹೇಳಿದರು.

ಅರುಣ್ ಕುಮಾರ್ ಪುತ್ತಿಲ ನನ್ನನ್ನು ಭೇಟಿಯಾಗಿರುವುದು ಸತ್ಯ: ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ನನ್ನನ್ನು ಭೇಟಿ ಮಾಡಿರುವುದು ಸತ್ಯ. ಬೇಷರತ್ತಾಗಿ ಮರಳಿ ಯಾವುದೇ ಷರತ್ತಿಲ್ಲದೆ ಬಿಜೆಪಿಗೆ ಸೇರ್ಪಡೆಯಾಗಿ, ಮತ್ತೆ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗೋಣ ಎಂದು ಹೇಳಿದ್ದೇನೆ. ನಾನು ಕೂಡ ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ ಎಂದು ವಿಜಯೇಂದ್ರ ಹೇಳಿದರು.

ಶಿಕ್ಷಕರ ಕ್ಷೇತ್ರ ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ:ಬಿಜೆಪಿ ಜೆಡಿಎಸ್ ನಡುವೆ ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಮುಂದೆ ಕೂಡ ಅದು ಉದ್ಭವಾಗುವುದಿಲ್ಲ. ಇವತ್ತು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಯಾಕೆ ಭೇಟಿ ಮಾಡಿದ್ದರು ಅನ್ನೋದು ಗೊತ್ತಿಲ್ಲ. ನಾನು ಮುಂದಿನ ತಿಂಗಳು ಮೊದಲ ವಾರ ದೆಹಳಿಗೆ ತೆರಳಿ ನಮ್ಮ ಹೈ ಕಮಾಂಡ್ ಅನ್ನು ಭೇಟಿ ಮಾಡುತ್ತೇನೆ ಎಂದು ವಿಜಯೇಂದ್ರ ಹೇಳಿದರು.

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗಳ ದಿಕ್ಸೂಚಿ ಅಲ್ಲ. ಸರ್ಕಾರ ಇದ್ದಾಗ ಉಪ ಚುನಾವಣೆಗಳು ಹೇಗೆ ನಡೆಯುತ್ತವೆ ಎಂಬುದು ಜನರಿಗೆ ಗೊತ್ತಿದೆ ಎಂದು ರಾಜ್ಯ .

ಇದನ್ನೂಓದಿ:ವಿಧಾನಸಭೆಯಲ್ಲಿ ಚರ್ಚೆಗೆ ಕಾರಣವಾದ ನಾಡಗೀತೆ ಸುತ್ತೋಲೆ; ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಭರವಸೆ

ABOUT THE AUTHOR

...view details