ಕರ್ನಾಟಕ

karnataka

ETV Bharat / videos

LIVE - ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ತರಾರಾಧನೆ ಮಹೋತ್ಸವ

🎬 Watch Now: Feature Video

ಶ್ರೀ ರಾಘವೇಂದ್ರ ಸ್ವಾಮಿ ಮಠ. (ETV Bharat)

By ETV Bharat Karnataka Team

Published : August 31, 2026 at 11:23 AM IST

Updated : August 31, 2026 at 3:42 PM IST

ರಾಯಚೂರು: ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಮೂರನೇ ಹಾಗೂ ಅಂತಿಮ ದಿನದ ಉತ್ತರಾರಾಧನೆ ಮಹೋತ್ಸವ ಇಂದು ಮಂತ್ರಾಲಯದಲ್ಲಿ ನಡೆಯುತ್ತಿದೆ.

355ನೇ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಸಂಭ್ರಮದ ಉತ್ತರಾರಾಧನೆ ದಿನವಾದ ಇಂದು ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದುಬಂದಿದೆ. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಪೂಜೆ ನೆರವೇರಲಿದೆ. ವಿವಿಧ ಬಗೆಯ ಪುಷ್ಪಗಳಿಂದ ರಾಯರ ಮೂಲ ಬೃಂದಾವನ ಕಂಗೊಳಿಸುತ್ತಿದೆ.

ಶ್ರೀಮಠದಲ್ಲಿ ಇಂದು ಬೆಳಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ನಿರ್ಮಾಲ್ಯ ವಿಸರ್ಜನೆ, ಗ್ರಂಥಗಳ ಪಾರಾಯಣ, ಪ್ರವಚನ, ದಾಸವಾಣಿ ಹೀಗೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಯುತ್ತಿದೆ. ಶ್ರೀಮಠದ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರಿಂದ ವಿಶೇಷ ಪೂಜೆ ನಡೆಯುತ್ತಿದ್ದು, ಶ್ರೀ ರಾಯರಿಗೆ ಹಸ್ತೋದಕ ಸಮರ್ಪಣೆ, ವಿಶೇಷ ಮಹಾಮಂಗಳಾರತಿ ನೆರವೇರಲಿದೆ. ವಸಂತೋತ್ಸವ, ಪ್ರಹ್ಲಾದ ರಾಜರ ಉತ್ಸವಕ್ಕೆ ಸಾಕ್ಷಿಯಾಗುವ ಮಂತ್ರಾಲಯದಲ್ಲಿ ಉತ್ತರಾರಾಧನೆ ಅಂಗವಾಗಿ ಅದ್ಧೂರಿಯಾಗಿ ಮಹಾರಥೋತ್ಸವ ನಡೆಯಲಿದೆ. 

ಆಗಸ್ಟ್​ 28ರಂದು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿತ್ತು.

Last Updated : August 31, 2026 at 3:42 PM IST