ETV Bharat / assembly-elections

ಕಮಲ ಅರಳಿಸಲು ಕೆ.ಆರ್.ಪೇಟೆಗೆ ಮತ್ತೊಮ್ಮೆ ಎಂಟ್ರಿ ಕೊಟ್ಟ ವಿಜಯೇಂದ್ರ

author img

By

Published : Apr 14, 2023, 8:31 PM IST

ಕೆ.ಆರ್.ಪೇಟೆಯಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು.

B Y Vijayendra
ಬಿ.ವೈ.ವಿಜಯೇಂದ್ರ

ಬಿ.ವೈ.ವಿಜಯೇಂದ್ರ ಅವರು ಸಚಿವ ಕೆ.ಸಿ.ನಾರಾಯಣ್ ಗೌಡ ಪರ ಭರ್ಜರಿ ಪ್ರಚಾರ ಭಾಷಣ ಮಾಡಿದರು

ಮಂಡ್ಯ: ಜೆಡಿಎಸ್ ಭದ್ರಕೋಟೆ ಮಂಡ್ಯದ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಿಎಸ್ವೈ ಪುತ್ರ ವಿಜಯೇಂದ್ರ ಕಮಲ್ ಮಾಡುವ ಮೂಲಕ ಕಮಲ ಅರಳಿಸಿದ್ದರು. ಇದೀಗ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎಂಟ್ರಿ ಕೊಟ್ಟಿದ್ದಾರೆ. ಕೆ.ಆರ್.ಪೇಟೆಯಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಗಿತ್ತು. ಸಮಾವೇಶದಲ್ಲಿ ಭಾಗಿಯಾದ ಬಿ.ವೈ.ವಿಜಯೇಂದ್ರ ಅವರಿಗೆ ಕ್ರೇನ್ ಮೂಲಕ ಬೃಹತ್ ಸೇಬಿನ ಹಾರ ಹಾಕಲಾಯಿತು. ಜೆಸಿಬಿ ಮೂಲಕ ಹೂವಿನ ಮಳೆಗರೆದು ಅದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಖಾಸಗಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು. ಸಚಿವ ನಾರಾಯಣ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಡಾ.ಇಂದ್ರೇಶ್, ಮೂಡ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಇತರರು ಭಾಗಿಯಾಗಿದ್ದರು.

ಬಿ.ವೈ.ವಿಜಯೇಂದ್ರ ಮಾತನಾಡಿ, ಪಕ್ಷವು ಶಿಕಾರಿಪುರಕ್ಕೆ ನನ್ನನ್ನು ಅಭ್ಯರ್ಥಿ ಮಾಡಿದ್ದಕ್ಕೆ ಸಂತೋಷ ಆಗ್ತಿದೆ. ಕೆ.ಆರ್.ಪೇಟೆಗೆ ನಾರಾಯಣಗೌಡರನ್ನು ಅಭ್ಯರ್ಥಿ ಮಾಡಿದೆ. ನನ್ನ ಜೀವನದಲ್ಲಿ ಮೊದಲ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿದ್ದೇನೆ. ನನ್ನ ಮೊದಲ ಚುನಾವಣಾ ಪ್ರಚಾರ ನಾರಾಯಣ ಗೌಡರ ಪರ, ಕೆ.ಆರ್.ಪೇಟೆ ಕ್ಷೇತ್ರದಿಂದ ಮಾಡ್ತಿದ್ದೇನೆ. ಮೇ 10ಕ್ಕೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎಂಬ ಉದ್ದೇಶದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಧೀಮಂತ ವ್ಯಕ್ತಿ ನಾರಾಯಣಗೌಡರು. ಕಳೆದ ಉಪ ಚುನಾವಣೆಯಲ್ಲಿ ಯಾರೂ ನಿರೀಕ್ಷಿಸಿರಲಿಲ್ಲ. ಬಿಜೆಪಿ ಅಭ್ಯರ್ಥಿ ನಾರಾಯಣಗೌಡರು ಗೆದ್ದರು. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಹುಲ್ಲು ಬೆಳೆಯಲ್ಲ ಅಂತಿದ್ರು. ಕೆ.ಆರ್.ಪೇಟೆ ಕ್ಷೇತ್ರದಲ್ಲಿ ನಾರಾಯಣಗೌಡರನ್ನು ಅತಿ ಹೆಚ್ಚು ಅಂತರದಿಂದ ಗೆಲ್ಲಿಸಿದ್ದು ನೀವು ಎಂದು ಹೇಳಿದರು.

ಒಕ್ಕಲಿಗರು, ವೀರಶೈವರು, ದಲಿತರು, ಹಾಲುಮತ ಸಮಾಜ, ಅಲ್ಪಸಂಖ್ಯಾತರು ಎಲ್ಲರೂ ಮತ ಕೊಟ್ಟರು. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಾಗ ವಿಪಕ್ಷಗಳು ಮನೆಯಲ್ಲಿ ಕೂರ್ತಾರೆ ಅಂತಾ ಭಾವಿಸಿದ್ದರು. ನಾರಾಯಣಗೌಡರು ಕೆ.ಆರ್.ಪೇಟೆ ಕ್ಷೇತ್ರಕ್ಕೆ 1,800 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ. ಇದಕ್ಕೆ ನಿಮ್ಮೆಲ್ಲರ ಆಶೀರ್ವಾದವೇ ಕಾರಣ. ಈಗ ಘೋಷಣೆ ಆಗಿರೋ ಚುನಾವಣೆಯಲ್ಲೂ ಗೆಲ್ಲಿಸಿ. ಮೊದಲ ಫಲಿತಾಂಶ ಬಿಜೆಪಿಯದ್ದೇ ಇರುತ್ತೆ. ಅದರಲ್ಲೂ ಕೆ.ಆರ್.ಪೇಟೆ ಕ್ಷೇತ್ರದ ಮೂಲಕವೇ ಮೊದಲ ಸ್ಥಾನ ಗೆಲ್ಲಲಿದ್ದೇವೆ'' ಎಂದು ಅಬ್ಬರದ ಭಾಷಣ ಮಾಡಿದರು.

ವಿಜಯೇಂದ್ರಣ್ಣ ಶೀಘ್ರ ಮುಖ್ಯಮಂತ್ರಿ ಆಗಲಿ- ನಾರಾಯಣ ಗೌಡ: ಸಚಿವ ಕೆ.ಸಿ.ನಾರಾಯಣ ಗೌಡ ಮಾತನಾಡಿ, ''ವಿಜಯೇಂದ್ರಣ್ಣ ಶೀಘ್ರ ಮುಖ್ಯಮಂತ್ರಿ ಆಗಲಿ, ನಾಲ್ಕು ಬಾರಿ ಸಿಎಂ ಆದ ಹೆಗ್ಗಳಿಕೆ ಯಡಿಯೂರಪ್ಪ ಅವರದ್ದು. ಜೆಡಿಎಸ್‌ನಲ್ಲಿ ಎರಡು ಬಾರಿ ಶಾಸಕನಾಗಿದ್ದೆ. ಆಗ ಏನೂ ಅಭಿವೃದ್ಧಿ ಮಾಡಲು ಆಗಿರಲಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗ್ತಾರೆ ಅಂತಾ ನಾನು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದೆ. ರಾಜ್ಯದಲ್ಲಿ ನುಡಿದಂತೆ ನಡೆಯುವವರು ಯಾರಾದ್ರೂ ಇದ್ರೆ ಯಡಿಯೂರಪ್ಪ ಮಾತ್ರ. ನಾನು ಬಿಜೆಪಿ ಸೇರಿದ ಬಳಿಕ ಮತ್ತೆ ಸಿಎಂ ಆದರು. ವಿಜಯೇಂದ್ರ ಅವರನ್ನು ಪ್ರಚಾರಕ್ಕೆ ಕಳಿಸಿಕೊಡಿ ಅಂತಾ ಕೇಳಿದೆ. ನನ್ನ ಗೆಲುವಿನ ಜವಾಬ್ದಾರಿ ಹೊತ್ತಿದ್ದು ವಿಜಯಣ್ಣ. 17ಕ್ಕೆ ನಾಮಪತ್ರ ಸಲ್ಲಿಸುತ್ತಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿ. ವಿಜಯೇಂದ್ರ ಅವರ ಕಾಲಿನ ಗುಣ ದೊಡ್ಡದು" ಎಂದರು.

ಇದನ್ನೂ ಓದಿ: 'ನಾಗಲೋಕಕ್ಕೆ ಗುಳ್ಳೆನರಿ ಹೋಲಿಕೆ ಸಾಧ್ಯವೇ?': ಶರತ್ ಬಚ್ಚೇಗೌಡಗೆ ಎಂಟಿಬಿ ಟಾಂಗ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.