ಭೀಕರ ರಸ್ತೆ ಅಪಘಾತ ಪೊಲೀಸ್​​​ ಸೇರಿ ಮೂವರ ಸಾವು.. ಹಲವರಿಗೆ ಗಾಯ

author img

By

Published : Sep 22, 2022, 4:11 PM IST

3 people, including cop, die in road accident in Howrah

ಅಪಘಾತದಲ್ಲಿ ಓರ್ವ ಪೋಲೀಸ್​ ಸಹ ಸಾವನ್ನಪ್ಪಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಆ ವೇಳೆ, ಪೊಲೀಸರು ರಸ್ತೆ ಮಧ್ಯೆ ಕಂಟೈನರ್ ನಿಲ್ಲಿಸಿ ಹಣ ವಸೂಲಿ ಮಾಡುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ್​​​​ ಟ್ರಕ್​, ನಿಯಂತ್ರಣ ಸಾಧ್ಯವಾಗದೇ ಮುಂದೆ ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದಿದೆ.

ಹೌರಾ( ಪಶ್ಚಿಮ ಬಂಗಾಳ): ಹೌರಾ ರಾಣಿಹಟಿ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಜೀವಗಳು ಬಲಿ ಆಗಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನೆಲ್ಲ ಹೌರಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಓರ್ವ ಪೋಲೀಸ್​ ಸಹ ಸಾವನ್ನಪ್ಪಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಆ ವೇಳೆ, ಪೊಲೀಸರು ರಸ್ತೆ ಮಧ್ಯೆ ಕಂಟೈನರ್ ನಿಲ್ಲಿಸಿ ಹಣ ವಸೂಲಿ ಮಾಡುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ್​​​​ ಟ್ರಕ್​, ನಿಯಂತ್ರಣ ಸಾಧ್ಯವಾಗದೇ ಮುಂದೆ ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದಿದೆ.

ಟ್ರಕ್ ಚಾಲಕ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟೈನರ್ ಚಾಲಕ ಪರಾರಿಯಾಗಿದ್ದಾನೆ. ಟ್ರಕ್ ಚಾಲಕ ಅಖ್ತರ್ ಅನ್ಸಾರಿ, ನಾಗರಿಕ ಸ್ವಯಂಸೇವಕ ಅರಿಂದಮ್ ಬಿಸ್ವಾಸ್ ಮತ್ತು ಪೊಲೀಸ್ ಉಜ್ಜಲ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಈ ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರನ್ನು ಅಂದೂಲ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಹೌರಾ ಆಸ್ಪತ್ರೆಗೆ ಕರೆತರಲಾಗಿದೆ.

ಇದನ್ನು ಓದಿ:30 ವರ್ಷಗಳ ಹಳೆಯ 5 ಅಂತಸ್ತಿನ ಕಟ್ಟಡ ಕುಸಿದು ಮೂವರು ದುರ್ಮರಣ, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.