ETV Bharat / bharat

INS ರಣವೀರ್​​​ನಲ್ಲಿ ಸ್ಫೋಟ: ನೌಕಾಸೇನೆಯ ಮೂವರು ಸಿಬ್ಬಂದಿ ಸಾವು, 11 ಮಂದಿಗೆ ಗಾಯ

author img

By

Published : Jan 18, 2022, 9:48 PM IST

Updated : Jan 18, 2022, 10:07 PM IST

ಭಾರತೀಯ ನೌಕಾಪಡೆಯ ಹಡಗು ಐಎನ್‌ಎಸ್ ರಣವೀರ್‌ನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

INS Ranvir
INS Ranvir

ಮುಂಬೈ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್​ಎಸ್​ ರಣವೀರ್​​ನಲ್ಲಿ ಸ್ಫೋಟ ಸಂಭವಿಸಿರುವ ಪರಿಣಾಮ ಮೂವರು ನೌಕಾಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, 11 ಮಂದಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಇವರನ್ನೆಲ್ಲ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಮುಂಬೈನ ನೇವಲ್​ ಡಾಕ್​​ಯಾರ್ಡ್​ನಲ್ಲಿ ಈ ಘಟನೆ ನಡೆದಿದೆ. ಐಎನ್​ಎಸ್​ ರಣವೀರ್ ನವೆಂಬರ್​ 2021ರಿಂದ ಪೂರ್ವ ನೌಕಾ ಕಮಾಂಡ್​​ನಿಂದ ಕರಾವಳಿಯ ಕಾರ್ಯಾಚರಣೆಗೆ ನಿಯೋಜನೆಗೊಂಡಿತ್ತು. ಕೆಲವೇ ದಿನಗಳಲ್ಲಿ ಬೇಸ್​​ಪೋರ್ಟ್​ಗೆ ಮರಳಬೇಕಿತ್ತು. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.

  • In an unfortunate incident today at Naval Dockyard Mumbai, 3 naval personnel lost their lives in an explosion in an internal compartment onboard INS Ranvir. Responding immediately, the ship's crew brought the situation under control. There is no major material damage. pic.twitter.com/c9wJUieCCj

    — ANI (@ANI) January 18, 2022 " class="align-text-top noRightClick twitterSection" data=" ">

ಯುದ್ಧನೌಕೆಯ ಆಂತರಿಕ ವಿಭಾಗದಲ್ಲಿ ಸ್ಪೋಟಗೊಂಡಿರುವ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ನೌಕೆಯಲ್ಲಿನ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ದೊಡ್ಡ ಅನಾಹುತ ತಪ್ಪಿದೆ ಎಂದು ರಕ್ಷಣಾ ಇಲಾಖೆ ಮಾಹಿತಿ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಲಾಗಿದೆ ಎಂದಿದ್ದಾರೆ.

Last Updated :Jan 18, 2022, 10:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.