ETV Bharat / bharat

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಮೂವರು ಯೋಧರ ದುರ್ಮರಣ, ಇಬ್ಬರಿಗೆ ಗಾಯ

author img

By

Published : Mar 4, 2022, 8:50 AM IST

3-soldiers-died-and-2-injured-in-road-accident-in-Uttar pradesh
ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಮೂವರು ಯೋಧರ ದುರ್ಮರಣ, ಇಬ್ಬರಿಗೆ ಗಾಯ

ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಬಸ್ತಿ(ಉತ್ತರ ಪ್ರದೇಶ): ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕೇಂದ್ರೀಯ ಭದ್ರತಾ ಪಡೆಯ ಯೋಧರು ಸಾವನ್ನಪ್ಪಿ, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಬಳಿಯ ಹೆದ್ದಾರಿಯಲ್ಲಿ ಎರಡು ವಾಹನಗಳು ಪರಸ್ಪರ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ, ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಭೀಕರ ಸ್ಫೋಟ: ಐವರು ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.