ETV Bharat / bharat

ದೇಶಾದ್ಯಂತ 405 ಹೈಕೋರ್ಟ್​ ನ್ಯಾಯಾಧೀಶ ಹುದ್ದೆಗಳು ಖಾಲಿ

author img

By

Published : Mar 25, 2022, 7:52 PM IST

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು, ದೇಶಾದ್ಯಂತ ಹೈಕೋರ್ಟ್‌ಗಳಲ್ಲಿ 405 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ.

405 posts of High Court judges vacant across the country
ದೇಶಾದ್ಯಂತ 405 ಹೈಕೋರ್ಟ್​ ನ್ಯಾಯಾಧೀಶರ ಹುದ್ದೆಗಳು ಖಾಲಿ: ಕೇಂದ್ರ ಮಾಹಿತಿ

ನವದೆಹಲಿ: ದೇಶಾದ್ಯಂತ ಹೈಕೋರ್ಟ್‌ಗಳಲ್ಲಿ ಮಂಜೂರಾಗಿರುವ 1,104 ನ್ಯಾಯಾಧೀಶರ ಪೈಕಿ 699 ನ್ಯಾಯಾಧೀಶರಿದ್ದು, 405 ಹುದ್ದೆಗಳು ಖಾಲಿ ಇವೆ ಎಂದು ಶುಕ್ರವಾರ ಸಂಸತ್ತಿಗೆ ಕೇಂದ್ರ ಸರ್ಕಾರ ತಿಳಿಸಿದೆ. ಖಾಲಿ ಇರುವ 405 ಖಾಲಿ ಹುದ್ದೆಗಳಲ್ಲಿ 175 ಹುದ್ದೆಗಳ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಕೊಲಿಜಿಯಂ ನಡುವೆ ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿವೆ ಎಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ಉತ್ತರಿಸಿದ್ದಾರೆ.

ಉಳಿದ 230 ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಹೈಕೋರ್ಟ್ ಕೊಲಿಜಿಯಂಗಳಿಂದ ಶಿಫಾರಸುಗಳನ್ನು ಸ್ವೀಕರಿಸಬೇಕಾಗಿದೆ. ಹೈಕೋರ್ಟ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ನಿರಂತರ, ಸಹಯೋಗದ ಪ್ರಕ್ರಿಯೆಯಾಗಿದೆ ಎಂದು ರಿಜಿಜು ಹೇಳಿದ್ದಾರೆ. ನ್ಯಾಯಾಧೀಶರ ನೇಮಕಕ್ಕೆ ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ವಿವಿಧ ಸಾಂವಿಧಾನಿಕ ಅಧಿಕಾರಿಗಳಿಂದ ಸಮಾಲೋಚನೆ ಮತ್ತು ಅನುಮೋದನೆಯ ಅಗತ್ಯವಿದೆ ಎಂದು ರಿಜಿಜು ತಿಳಿಸಿದ್ದಾರೆ.

ಖಾಲಿ ಹುದ್ದೆಗಳನ್ನು ತ್ವರಿತವಾಗಿ ತುಂಬಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ. ಕೆಲವು ನ್ಯಾಯಾಧೀಶರ ನಿವೃತ್ತಿ, ರಾಜೀನಾಮೆ ಅಥವಾ ಬಡ್ತಿಯ ಕಾರಣದಿಂದಾಗಿ ಉಚ್ಚ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಹುದ್ದೆಗಳು ತೆರವಾಗುತ್ತವೆ. ನ್ಯಾಯಾಂಗ ವ್ಯವಸ್ಥೆಯ ನೇಮಕಾತಿಯಲ್ಲಿ ಸಾಮಾಜಿಕ ವೈವಿಧ್ಯತೆ ಇರುವಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಒಳಗೊಂಡ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸುವಂತೆ ಸರ್ಕಾರ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: 577 ಭಾರತೀಯ ಮೀನುಗಾರರು ಪಾಕಿಸ್ತಾನದ ವಶದಲ್ಲಿದ್ದಾರೆ: ಕೇಂದ್ರ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.