ETV Bharat / bharat

ಕಾಶ್ಮೀರದಲ್ಲಿ 7 ಮಂದಿ ಉಗ್ರರ ಬೇಟೆ: ಮೂವರು ನಾಗರಿಕರು, ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯ

author img

By

Published : Apr 10, 2021, 7:14 AM IST

ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಒಟ್ಟು ಏಳು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್​ ಪೊಲೀಸ್​ (ಐಜಿಪಿ) ಕಾಶ್ಮೀರ ವಿಜಯ್ ಕುಮಾರ್ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ತಂಡ ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆಸಿದ್ದರು.

gunfights
ಕಾಶ್ಮೀರದಲ್ಲಿ ಗುಂಡಿನ ಚಕಮಕಿ

ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಏಳು ಉಗ್ರರನ್ನು ಹೆಡೆಮುರಿ ಕಟ್ಟಲಾಗಿದೆ. ಈ ವೇಳೆ ಮೂವರು ನಾಗರಿಕರು ಮತ್ತು ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ್ ಪೊಲೀಸ್​ ಮಹಾನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ

ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಟ್ರಾಲ್ ಪ್ರದೇಶದಲ್ಲಿ ಇಬ್ಬರು ಉಗ್ರರು ಹತರಾಗಿದ್ದರೆ, ಶೋಪಿಯಾನ್ ಪ್ರದೇಶದಲ್ಲಿ ಇತರ ಐವರು ಉಗ್ರರನ್ನು ಸದೆಬಡಿಯಲಾಗಿದೆ. ಹತರಾದವರಲ್ಲಿ ಓರ್ವ ಅನ್ಸರ್ ಘಜ್ವತ್ ಉಲ್ ಹಿಂದ್ (ಎಜಿಹೆಚ್) ಗೆ ಸೇರಿದ ಭಯೋತ್ಪಾದಕ ಎಂದು ತಿಳಿದು ಬಂದಿದೆ. ಈ ಉಗ್ರರು ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗ್ತಿದೆ.

ಶುಕ್ರವಾರ, ಗುಂಡಿನ ಚಕಮಕಿ ಪುನಾರಂಭವಾಗುತ್ತಿದ್ದಂತೆ ಶೋಪಿಯನ್​​ನಲ್ಲಿ ಪ್ರತಿಭಟನೆಗಳು ನಡೆದವು. ಈ ವೇಳೆ ಮೂವರು ನಾಗರಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಮತ್ತು ಮೂವರು ಸೈನಿಕರು ಸಹ ಗಾಯಗೊಂಡಿದ್ದಾರೆ ಎಂದು ಐಜಿಪಿ ವಿವರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.