ETV Bharat / bharat

ಅಪ್ರಾಪ್ತೆ ಮೇಲೆ 9 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ : ದೂರು ದಾಖಲು

author img

By

Published : Apr 16, 2022, 8:05 PM IST

ಮಹಾರಾಷ್ಟ್ರದ ವಿಠಲವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತನೋರ್ವ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದ್ದು, ದೂರು ದಾಖಲಾಗಿದೆ..

a-nine-year-old-boy-sexually-assaulted-a-four-and-a-half-year-old-girl
ಅಪ್ರಾಪ್ತೆ ಮೇಲೆ 9 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ: ದೂರು ದಾಖಲು

ಥಾಣೆ, ಮಹಾರಾಷ್ಟ್ರ: ಒಂಬತ್ತು ವರ್ಷದ ಬಾಲಕನೊಬ್ಬ ಪಕ್ಕದ ಮನೆಯ ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ವಿಠಲವಾಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಏಪ್ರಿಲ್ 3ರಂದು ಸಂತ್ರಸ್ತೆಯನ್ನು ಆಡುವ ನೆಪದಲ್ಲಿ ಮನೆಯ ಹಿಂಭಾಗಕ್ಕೆ ಕರೆದೊಯ್ದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದನು.

ಕೆಲವು ದಿನಗಳ ನಂತರ ಸಂತ್ರಸ್ತ ಬಾಲಕಿಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ತಾಯಿ ಆಕೆಯನ್ನು ಪ್ರಶ್ನಿಸಿದಾಗ ಮಾಹಿತಿ ಬೆಳಕಿಗೆ ಬಂದಿದೆ. ಏಪ್ರಿಲ್ 15ರಂದು ಸಂತ್ರಸ್ತೆಯ ತಾಯಿ ವಿಠ್ಠಲವಾಡಿ ಪೊಲೀಸ್ ಠಾಣೆಗೆ ಧಾವಿಸಿ 9 ವರ್ಷದ ಬಾಲಕನ ವಿರುದ್ಧ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಬಾಲಕನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದ್ದು, ಪ್ರಕರಣದ ತನಿಖೆ ಮುಂದುವರೆಯುತ್ತಿದೆ.

ಇದನ್ನೂ ಓದಿ: ಇನ್​ಸ್ಟಾಗ್ರಾಮ್​ನಲ್ಲಿ ಬ್ಲ್ಯಾಕ್‌ಮೇಲ್ ಮಾಡಿ ಯುವತಿಯ ಸಾವಿಗೆ ಕಾರಣನಾದವ ಅರೆಸ್ಟ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.