ಪ್ರಯಾಣಿಕರಿದ್ದ ಬಸ್​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ.. ಸಿಟಿ ಬಸ್ ಸುಟ್ಟು ಕರಕಲು

author img

By

Published : Sep 18, 2022, 6:32 PM IST

a-running-bus-caught-fire-in-aurambad-no-casualties

ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು, ದಟ್ಟ ಹೊಗೆ ಆವರಿಸಿತ್ತು.

ಔರಂಗಾಬಾದ್ (ಮಹಾರಾಷ್ಟ್ರ): ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್​ ಹೊತ್ತಿ ಉರಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಇಲ್ಲಿನ ಕರ್ಮದ್‌ನಿಂದ ಔರಂಗಾಬಾದ್ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಬರುತ್ತಿದ್ದಾಗ ವರೂದ್ ಫಟಾ ಬಳಿ ಸಿಟಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಸಂರ್ಪೂಣವಾಗಿ ಬಸ್​ ಹೊತ್ತಿ ಉರಿದಿದ್ದು, ದಟ್ಟ ಹೊಗೆ ಆವರಿಸಿತ್ತು. ಇದನ್ನು ಕಂಡ ಜನರು ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜಮಾವಣೆಕೊಂಡಿದ್ದರು. ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅಗ್ನಿ ನಂದಿಸಿದ್ದಾರೆ.

ಇನ್ನು, ಬಸ್​ನಲ್ಲಿ ಹತ್ತರಿಂದ ಹನ್ನೆರಡು ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಆದರೆ, ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ.

ಇದನ್ನೂ ಓದಿ: ಗುಜರಾತ್​ನ ಮುಂದ್ರಾ ಬಂದರಿನಲ್ಲಿ 48 ಕೋಟಿ ಮೌಲ್ಯದ ಇ ಸಿಗರೇಟ್​ಗಳ ಜಪ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.