ETV Bharat / bharat

ಪಂಚ ರಾಜ್ಯ ಚುನಾವಣೆಗೂ ಮುನ್ನ ವೀಕ್ಷಕರ ಸಭೆ ನಡೆಸಿದ ಕೇಂದ್ರ ಚುನಾವಣಾ ಆಯೋಗ

author img

By PTI

Published : Oct 5, 2023, 10:54 PM IST

ಚುನಾವಣಾ ಆಯೋಗವು ಶುಕ್ರವಾರ ವೀಕ್ಷಕರ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಛತ್ತೀಸ್​ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಂ, ರಾಜಸ್ಥಾನದಲ್ಲಿ ನಡೆಯುವ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ahead-of-announcing-poll-schedule-ec-convenes-meeting-of-observers
ಪಂಚ ರಾಜ್ಯ ಚುನಾವಣೆಗೂ ಮುನ್ನ ವೀಕ್ಷಕರ ಸಭೆ ನಡೆಸಿದ ಚುನಾವಣಾ ಆಯೋಗ

ನವದೆಹಲಿ : ಪಂಚ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಚುನಾವಣಾ ಆಯೋಗವು ಶುಕ್ರವಾರ ವೀಕ್ಷಕರ ಸಭೆ ನಡೆಸಿತು. ಚುನಾವಣೆ ಸಿದ್ಧತೆ ಮತ್ತು ಚುನಾವಣಾ ಪೂರ್ವ ಪ್ರಕ್ರಿಯೆಗಳ ಬಗ್ಗೆ ಚರ್ಚೆ ನಡೆಸಿದೆ.

ಚುನಾವಣಾ ಆಯೋಗವು, ಪೊಲೀಸರ ಮತ್ತು ವೀಕ್ಷಕರ ಸಭೆಯಲ್ಲಿ ಮಾದರಿ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಿರ್ಧರಿಸಿದೆ. ಚುನಾವಣೆ ಸಂದರ್ಭದಲ್ಲಿ ನಡೆಯುವ ಅಕ್ರಮಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಈ ಮೂಲಕ ಪ್ರಜಾಪ್ರಭುತ್ವದ ಕಾರ್ಯತಂತ್ರವನ್ನು ಸುಗಮಗೊಳಿಸುವ ಗುರಿ ಹೊಂದಿದೆ. ಚುನಾವಣಾ ಆಯೋಗವು ಈಗಾಗಲೇ ರಾಜಸ್ಥಾನ, ಮಿಜೋರಾಂ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದೆ. ಗುರುವಾರ ತೆಲಂಗಾಣ ಪ್ರವಾಸವನ್ನು ಮುಕ್ತಾಯಗೊಳಿಸಿದೆ.

ಇನ್ನು, ಕೆಲವೇ ದಿನಗಳಲ್ಲಿ ಪಂಚ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಸಾಧ್ಯತೆ ಇದೆ. ನವೆಂಬರ್​ ಅಥವಾ ಡಿಸೆಂಬರ್​ ತಿಂಗಳಲ್ಲಿ ಛತ್ತೀಸ್​ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಂ, ರಾಜಸ್ಥಾನದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ತೆಲಂಗಾಣ, ರಾಜಸ್ಥಾನ, ಛತ್ತೀಸ್​ಗಢ, ರಾಜಸ್ಥಾನದ ಶಾಸಕಾಂಗ ಸಭೆಯ ಅವಧಿ ಜನವರಿಯಲ್ಲಿ ಮುಕ್ತಾಯವಾಗಲಿದೆ.

ಸದ್ಯ ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್​ ನೇತೃತ್ವದ ಭಾರತ್​ ರಾಷ್ಟ್ರ ಸಮಿತಿ( ಬಿಆರ್​ಎಸ್​) ಆಡಳಿತ ನಡೆಸುತ್ತಿದೆ. ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಛತ್ತೀಸ್​ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್​ ಭಘೇಲ್​ ನೇತೃತ್ವದ ಕಾಂಗ್ರೆಸ್​ ಸರ್ಕಾರ ಆಡಳಿತ ನಡೆಸುತ್ತಿದ್ದು, ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​​ ನೇತೃತ್ವದ ಕಾಂಗ್ರೆಸ್​ ಸರ್ಕಾರ ಆಡಳಿತ ನಡೆಸುತ್ತಿದೆ. ಚುನಾವಣೆ ಹಿನ್ನಲೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆ: ತೆಲಂಗಾಣಕ್ಕೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ಭೇಟಿ, ಮಾಹಿತಿ ಸಂಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.