ETV Bharat / bharat

ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣ: ಪಿ ಚಿದಂಬರಂಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ದೆಹಲಿ ಕೋರ್ಟ್

author img

By

Published : Dec 20, 2021, 7:00 PM IST

ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡಿದೆ.

ಪಿ ಚಿದಂಬರಂ
ಪಿ ಚಿದಂಬರಂ

ನವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯದ (ಇಡಿ) ನಡೆಯುತ್ತಿರುವ ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಖುದ್ದು ಹಾಜರಾಗುವುದಕ್ಕೆ ವಿನಾಯಿತಿ ನೀಡಿದೆ. ಇದರ ನಡುವೆ ಕಾರ್ತಿ ಚಿದಂಬರಂ ಅವರು ಸಹ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ಪ್ರಕರಣದಲ್ಲಿ ಇಬ್ಬರೂ ನಿರೀಕ್ಷಣಾ ಜಾಮೀನಿನ ಮೇಲೆ ಇದ್ದಾರೆ ಎಂದು ಚಿದಂಬರಂ ಪರ ವಕೀಲ ಅರ್ಷದೀಪ್ ಸಿಂಗ್ ಖುರಾನಾ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರ ಗಮನಕ್ಕೆ ತಂದರು. ಈ ಪ್ರಕರಣದಲ್ಲಿ ನಿಯಮಿತ ಜಾಮೀನು ನೀಡುವಂತೆ ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಮಧುರೈನಲ್ಲಿ ವಿಚಾರಣೆಗೆ ಬಂದಿದ್ದ ಇಬ್ಬರು ಮಹಿಳಾ ಪೊಲೀಸರಿಗೆ ಮಾರಕಾಸ್ತ್ರ ತೋರಿಸಿ ವ್ಯಕ್ತಿ ಬೆದರಿಕೆ.. ವಿಡಿಯೋ ವೈರಲ್‌

ಪಿ ಚಿದಂಬರಂ ಅವರು ಪೂರ್ವಪ್ರತ್ಯಯ ಪ್ರಯಾಣದ ವೇಳಾಪಟ್ಟಿ ಹೊಂದಿರುವುದರಿಂದ ನ್ಯಾಯಾಲಯದ ಮುಂದೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿ ಮೂಲಕ ತಿಳಿಸಿದ್ದಾರೆ. ಅವರ ವಿನಾಯಿತಿ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಆರೋಪಿಗಳಿಗೆ ಚಾರ್ಜ್ ಶೀಟ್ ಮತ್ತು ದಾಖಲೆಗಳ ಪ್ರತಿಗಳನ್ನು ನೀಡುವಂತೆ ತನಿಖಾ ಸಂಸ್ಥೆಗಳಿಗೆ ನ್ಯಾಯಾಲಯ ಸೂಚಿಸಿದೆ.

ಈ ಪ್ರಕರಣದಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ ಚಾರ್ಜ್ ಶೀಟ್‌ಗಳನ್ನು ನ್ಯಾಯಾಲಯವು ಗಮನಕ್ಕೆ ತೆಗೆದುಕೊಂಡ ನಂತರ ಆರೋಪಿಗಳು ತಮ್ಮ ವಿರುದ್ಧ ನೀಡಲಾದ ಸಮನ್ಸ್‌ನ ಅನ್ವಯ ದೆಹಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

CBI ಮತ್ತು EDಯ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾದ ಎಲ್ಲ ಆರೋಪಿಗಳನ್ನು ಡಿಸೆಂಬರ್ 20, 2021 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ. ಏಜೆನ್ಸಿಯು ಆರೋಪ ಪಟ್ಟಿಯಲ್ಲಿ ಆರೋಪಿತರಾಗಿರುವ ಹಲವಾರು ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಉಲ್ಲೇಖಿಸಿದೆ.

ತನಿಖಾ ಸಂಸ್ಥೆಗಳ ಪರ ಹಾಜರಾದ ಹೆಚ್ಚುವರಿ ಸಂಜಯ್ ಜೈನ್, ಏಜೆನ್ಸಿಗಳು ವಿವಿಧ ದೇಶಗಳಿಗೆ ಎಲ್‌ಆರ್‌ಗಳನ್ನು ಕಳುಹಿಸಿವೆ ಮತ್ತು ಆ ನಿಟ್ಟಿನಲ್ಲಿ ಕೆಲವು ಬೆಳವಣಿಗೆಗಳಿವೆ ಎಂದು ಈ ಹಿಂದೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.