ETV Bharat / bharat

ಯುಪಿ ಚುನಾವಣೆಯಲ್ಲಿ ಅಖಿಲೇಶ್​ ಯಾದವ್​ ಸ್ಪರ್ಧೆ.. ಕರ್ಹಾಲ್​ ಕ್ಷೇತ್ರದಿಂದ ಅಖಾಡಕ್ಕಿಳಿದ SP ಸಂಸದ

author img

By

Published : Jan 20, 2022, 6:31 PM IST

Akhilesh Yadav to contest UP polls
Akhilesh Yadav to contest UP polls

Akhilesh Yadav to contest UP polls : ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಸ್ಪರ್ಧೆ ಮಾಡುವುದು ಖಚಿತಗೊಂಡಿದೆ. ಮೈನ್​ಪುರಿ ಜಿಲ್ಲೆಯ ಕರ್ಹಾಲ್​ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​ ಇದೀಗ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭಾ​ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್​ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ಸಂಬಂಧಿಸಿದಂತೆ ಪಕ್ಷ ಅಧಿಕೃತವಾಗಿ ಮಾಹಿತಿ ಹೊರಹಾಕಿದೆ. ಹೀಗಾಗಿ, ಇಷ್ಟುದಿನ ಉಂಟಾಗಿದ್ದ ಗೊಂದಲಗಳಿಗೆ ಕೊನೆಗೂ ತೆರೆ ಬಿದ್ದಿದೆ.

ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಲೋಕಸಭೆ ಸಂಸದರಾಗಿರುವ ಅಖಿಲೇಶ್ ಯಾದವ್​​ ಇಲ್ಲಿಯವರೆಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಆದರೆ, ಇದೇ ಮೊದಲ ಸಲ ಅವರು ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿರಿ: ಸಿಎಂ ಯೋಗಿ ವಿರುದ್ಧ ತೊಡೆ ತಟ್ಟಿದ ಚಂದ್ರಶೇಖರ್​ ಆಜಾದ್​​.. ಗೋರಖ್​​ಪುರ ಕ್ಷೇತ್ರದಲ್ಲಿ ಮುಖಾಮುಖಿ

ಕಳೆದ ಕೆಲ ದಿನಗಳ ಹಿಂದೆ ಈ ವಿಚಾರವಾಗಿ ಖುದ್ದಾಗಿ ಮಾತನಾಡಿದ್ದ ಅಖಿಲೇಶ್ ಯಾದವ್, ತಾವು ಚುನಾವಣೆಗೆ ಸ್ಪರ್ಧೆ ಮಾಡದೇ ಪ್ರತಿಯೊಂದು ಕ್ಷೇತ್ರಗಳ ಮೇಲೆ ಗಮನ ಹರಿಸುವುದಾಗಿ ತಿಳಿಸಿದ್ದರು. ಈ ಹಿಂದೆ 2012ರಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದ್ದ ವೇಳೆ ಅತಿ ಕಿರಿಯ ವಯಸ್ಸಿನ ಅಖಿಲೇಶ್ ಯಾದವ್​(38 ವರ್ಷ) ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ವಿಧಾನಸಭೆಯಲ್ಲಿ ಮೊದಲ ಸಲ ಅದೃಷ್ಟ ಪರೀಕ್ಷೆಗಿಳಿದ ಯೋಗಿ, ಅಖಿಲೇಶ್​, ಚಂದ್ರಶೇಖರ್

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಸಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ಆಜಾದ್​ ಸಮಾಜ್​​ ಪಕ್ಷದ ಚಂದ್ರಶೇಖರ್​ ಆಜಾದ್​​ ಕಣಕ್ಕಿಳಿದಿದ್ದು, ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.