ETV Bharat / bharat

ಹೈದರಾಬಾದ್​​ ಗ್ಯಾಂಗ್​ರೇಪ್​​ ಪ್ರಕರಣ: ಕರ್ನಾಟಕದಲ್ಲಿ ಮೂವರು ಆರೋಪಿಗಳ ಬಂಧನ

author img

By

Published : Jun 4, 2022, 4:16 PM IST

Hyderabad gang rape case.. ಶುಕ್ರವಾರ ಐವರು ಆರೋಪಿಗಳ ಪೈಕಿ ಸಾದುದ್ದೀನ್​ ಮಲಿಕ್​ ಮತ್ತು ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು. ಇದೀಗ ಉಮರ್​ಖಾನ್​ ಹಾಗೂ ಮತ್ತಿಬ್ಬರು ಅಪ್ರಾಪ್ತರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ.

all-five-accused-involved-in-hyderabad-gang-rape-case-held
ಹೈದರಾಬಾದ್​​ನಲ್ಲಿ ಬಾಲಕಿಯ ಗ್ಯಾಂಗ್​ರೇಪ್​​ ಪ್ರಕರಣ: ಕರ್ನಾಟಕದಲ್ಲಿ ಮೂವರು ಆರೋಪಿಗಳ ಬಂಧನ

ಹೈದರಾಬಾದ್​ (ತೆಲಂಗಾಣ): ಹೈದರಾಬಾದ್​​ನಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಮೂವರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಕೃತ್ಯದಲ್ಲಿ ಭಾಗಿಯಾದ ಎಲ್ಲ ಐದು ಆರೋಪಿಗಳು ಪೊಲೀಸ್​​ ಬಲೆಗೆ ಬಿದ್ದಂತೆ ಆಗಿದೆ.

ಜುಬಿಲಿ ಹಿಲ್ಸ್​​ನಲ್ಲಿ ಮೇ 31ರಂದು ಪಬ್​​ಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಲಾಗಿತ್ತು. ಐವರು ಆರೋಪಿಗಳು ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಈ ಕೃತ್ಯದಲ್ಲಿ ಮೂವರು ಅಪ್ರಾಪ್ತ ಬಾಲಕರು ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಐವರು ಆರೋಪಿಗಳ ಪೈಕಿ ಸಾದುದ್ದೀನ್​ ಮಲಿಕ್​ ಮತ್ತು ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು. ಇದೀಗ ಉಮರ್​ಖಾನ್​ ಹಾಗೂ ಮತ್ತಿಬ್ಬರು ಅಪ್ತಾಪ್ತರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸರ್ಕಾರ ವಿರುದ್ಧ ಮುಗಿಬಿದ್ದ ಪ್ರತಿಪಕ್ಷಗಳು: ಈ ಅತ್ಯಾಚಾರ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಕಾಂಗ್ರೆಸ್​, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ವಾಗ್ದಾಳಿ ನಡೆಸಿವೆ. ಈ ಕೃತ್ಯಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ ಆಗ್ರಹಿಸಿದ್ದಾರೆ.

ಕಾಂಗ್ರೆಸ್​​ ನಾಯಕ ಭಟ್ಟಿ ವಿಕ್ರಮಾರ್ಕ ಸಹ ಟಿಆರ್​​ಎಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಬ್​​ಗಳು ನಿಯಮ ಉಲ್ಲಂಘಿಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ನಿರ್ಲಕ್ಷ್ಯದಿಂದಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಜನಸೇನಾ ಪ್ರತಿಭಟನೆ: ಇತ್ತ, ಈ ಘಟನೆಯನ್ನು ಖಂಡಿಸಿ ಜನಸೇನಾ ಕಾರ್ಯಕರ್ತರು ಜುಬಿಲಿ ಹಿಲ್ಸ್​​ ಪೊಲೀಸ್​ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಠಾಣೆಯೊಳಗೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುಮಾರು 30 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ... ರಾಜಕೀಯ ಪಕ್ಷದ ಮುಖಂಡರ ಪುತ್ರ ಭಾಗಿ!?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.