ETV Bharat / bharat

ಇಂಡಿಯಾ ಒಕ್ಕೂಟದಲ್ಲೇ ಆಪ್​​​ ಪಕ್ಷ ಇರಲಿದೆ: ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ

author img

By ETV Bharat Karnataka Team

Published : Sep 29, 2023, 5:31 PM IST

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ನಾವು ಸಂಪೂರ್ಣವಾಗಿ ಬದ್ಧವಾಗಿದೆ ಮತ್ತು ಒಕ್ಕೂಟದಿಂದ ಹೊರ ಬರುವುದಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ ನೀಡಿದ್ದಾರೆ.

arvind-kejriwal-announcement-aap-will-not-leave-india-alliance
ಇಂಡಿಯಾ ಒಕ್ಕೂಟದೊಂದಿಗೆ ಆಮ್ ಆದ್ಮಿ ಪಕ್ಷ ಇರಲಿದೆ: ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ

ನವದೆಹಲಿ: ಪಂಜಾಬ್‌ನಲ್ಲಿ ಕಾಂಗ್ರೆಸ್​ ಶಾಸಕನ ಬಂಧನಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್‌ ನಾಯಕರ ನಡುವೆ ವಾಗ್ವಾದ ನಡೆಯುತ್ತಿದ್ದು, ಇಂಡಿಯಾ ಮೈತ್ರಿ ಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ ನೀಡಿದ್ದಾರೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ನಾವು ಸಂಪೂರ್ಣವಾಗಿ ಬದ್ಧವಾಗಿದ್ದೇವೆ ಮತ್ತು ಒಕ್ಕೂಟದಿಂದ ಹೊರ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • #WATCH आम आदमी पार्टी INDIA गठबंधन के प्रति समर्पित हैं। आम आदमी पार्टी किसी भी हालत में INDIA गठबंधन से अलग नहीं होगी... आम आदमी पार्टी सरकार नशे को खत्म करने के लिए प्रतिबद्ध है.. लेकिन मैं किसी विशेष केस या किसी व्यक्ति विशेष पर बात नहीं कर रहा क्योंकि मेरे पास जानकारी नहीं… pic.twitter.com/sfHSKb4yOh

    — ANI_HindiNews (@AHindinews) September 29, 2023 " class="align-text-top noRightClick twitterSection" data=" ">

ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ತಾನು ಪ್ರಧಾನಿ ಎಂದು ಭಾವಿಸುವಂತಹ ವ್ಯವಸ್ಥೆಯನ್ನು ರೂಪಿಸಬೇಕು ಎಂಬುದು ನಮ್ಮ ಏಕೈಕ ನಿಲುವು ಎಂದ ಅವರು, ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮಗೊಳಿಸಲಾಗಿಲ್ಲವೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ, ಅದಷ್ಟು ಬೇಗ ಸೀಟು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರ ಬಂಧನದ ಬಗ್ಗೆ ಕೇಜ್ರಿವಾಲ್ ಹೇಳಿದ್ದೇನು?: ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ ಉದ್ವಿಗ್ನತೆಯ ಬಗ್ಗೆ ಮಾತನಾಡಿದ ಕೇಜ್ರಿವಾಲ್, ಪಂಜಾಬ್ ಪೊಲೀಸರು ನಿನ್ನೆ ಕೆಲವು ಕಾಂಗ್ರೆಸ್ ಮುಖಂಡರನ್ನು ಬಂಧಿಸಿದ್ದಾರೆ. ಅದರ ವಿವರಗಳು ನನ್ನ ಬಳಿ ಇಲ್ಲ. ನಾವು ಡ್ರಗ್ಸ್ ವಿರುದ್ಧ ಸಮರ ಸಾರಿದ್ದೇವೆ. ಯಾವುದೇ ವೈಯಕ್ತಿಕ ಪ್ರಕರಣ ಅಥವಾ ವ್ಯಕ್ತಿಯ ಬಗ್ಗೆ ಪ್ರತಿಕ್ರಿಯಿಸಬೇಕಾಗಿಲ್ಲ, ಆದರೆ ನಾವು ಡ್ರಗ್ಸ್ ಅನ್ನು ಕೊನೆಗೊಳಿಸಲು ಬದ್ಧರಾಗಿದ್ದೇವೆ. ಅದರ ವಿರುದ್ಧದ ಹೋರಾಟದಲ್ಲಿ ಯಾರನ್ನೂ ಬಿಡುವುದಿಲ್ಲ. ಅವರು ದೊಡ್ಡರಾಗಿರಲಿ ಅಥವಾ ಸಣ್ಣ ವ್ಯಕ್ತಿಯಾಗಿರಲಿ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆ: ಕಳೆದ ಕೆಲವು ದಿನಗಳಿಂದ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸಂಘರ್ಷ ಉಂಟಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಸೀಟು ಹಂಚಿಕೊಳ್ಳಲು ನಿರಾಕರಿಸಿರುವ ಪಂಜಾಬ್​ನ ಕಾಂಗ್ರೆಸ್ ಮುಖಂಡರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲ 13 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ, ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಹಲವು ಆಂತರಿಕ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಪಂಜಾಬ್​ನ ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಬಂಧನ: ಮತ್ತೊಂದೆಡೆ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಪಂಜಾಬ್ ಪೊಲೀಸರು ಗುರುವಾರ ಬಂಧಿಸಿದ್ದರು. 2015 ರಲ್ಲಿ ದಾಖಲಾದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪಂಜಾಬ್ ಪೊಲೀಸರ ತಂಡ ಖೈರಾ ನಿವಾಸದ ಮೇಲೆ ದಾಳಿ ನಡೆಸಿತ್ತು. ಮಾಹಿತಿಯ ಪ್ರಕಾರ, ಪಂಜಾಬ್ ಪೊಲೀಸರು ಗುರುವಾರ ಬೆಳಗ್ಗೆ ಖೈರಾ ಅವರ ಚಂಡೀಗಢ ನಿವಾಸದ ಮೇಲೆ ದಾಳಿ ನಡೆಸಿದ್ದರು. ನಂತರ ಅವರನ್ನು ಬಂಧಿಸಿ ಜಲಾಲಾಬಾದ್‌ಗೆ ಕರೆದೊಯ್ದಿದ್ದರು.

ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯಿಂದ ವಿವಿಧ ರಾಜ್ಯಗಳಲ್ಲಿ ಶಾರ್ಪ್ ಶೂಟರ್‌ಗಳ ನೇಮಕ: ಎನ್‌ಐಎ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.