Assam crime: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ: ಅತ್ಯಾಚಾರ ಶಂಕೆ
Published: Aug 6, 2023, 4:46 PM


Assam crime: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ: ಅತ್ಯಾಚಾರ ಶಂಕೆ
Published: Aug 6, 2023, 4:46 PM

Assam crime: ಅಸ್ಸಾಂನ ಕಾಮ್ರೂಪ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಇಬ್ಬರು ಸಹೋದರ ಸಂಬಂಧಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಗುವಾಹಟಿ (ಅಸ್ಸಾಂ): ಇಬ್ಬರು ಯುವತಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಈಶಾನ್ಯ ರಾಜ್ಯ ಅಸ್ಸಾಂನ ಕಾಮ್ರೂಪ್ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರದಿಂದ ಮನನೊಂದು ಯುವತಿಯರು ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ತುಳಸಿಬರಿ ಪ್ರದೇಶದಲ್ಲಿ ಇಂದು ಬೆಳಗ್ಗೆ 19 ವರ್ಷ ಹಾಗೂ 17 ವರ್ಷದ ಯುವತಿಯರ ಮೃತದೇಹಗಳು ಏಕಕಾಲಕ್ಕೆ ಪತ್ತೆಯಾಗಿವೆ. ಪ್ರತ್ಯೇಕ ಸ್ಥಳದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಂತಿದ್ದ ಶವಗಳನ್ನು ಸ್ಥಳೀಯರು ಗಮನಿಸಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಯುವತಿಯರು ಅತ್ಯಾಚಾರಕ್ಕೊಳಗಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಸಾವಿನ ಹಿಂದಿನ ಕಾರಣ ಪತ್ತೆ ಹಚ್ಚಲು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.
ಕಾಮ್ರೂಪ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಿತೇಶ್ ಚಂದ್ರರಾಯ್ ಪ್ರತಿಕ್ರಿಯಿಸಿ, ''ಯುವತಿಯರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಬಂದ ನಂತರವೇ ಮುಂದಿನ ತೀರ್ಮಾನಕ್ಕೆ ಬರಬಹುದು. ಪೊಲೀಸ್ ತಂಡ ಘಟನೆಯನ್ನು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ'' ಎಂದರು.
