ETV Bharat / bharat

ವರ್ಷಾಂತ್ಯಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರಾ ಅಥಿಯಾ ಶೆಟ್ಟಿ - ಕೆ ಎಲ್ ರಾಹುಲ್ !

author img

By

Published : Jul 12, 2022, 5:25 PM IST

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರ ಮದುವೆಯ ವದಂತಿಗಳು ಮತ್ತೆ ಮುನ್ನೆಲೆಗೆ ಬಂದಿವೆ. ಮುಂಬೈನಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾಗಲಿದ್ದಾರೆ ಎನ್ನಲಾಗಿದೆ.

ವರ್ಷಾಂತ್ಯಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರಾ ಅಥಿಯಾ ಶೆಟ್ಟಿ ಹಾಗೂ ಕೆ ಎಲ್ ರಾಹುಲ್
ವರ್ಷಾಂತ್ಯಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರಾ ಅಥಿಯಾ ಶೆಟ್ಟಿ ಹಾಗೂ ಕೆ ಎಲ್ ರಾಹುಲ್

ಮುಂಬೈ (ಮಹಾರಾಷ್ಟ್ರ): ಐಪಿಎಲ್​ನ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಮತ್ತು ಭಾರತೀಯ ರಾಷ್ಟ್ರೀಯ ತಂಡದ ಉಪನಾಯಕ ಕೆ ಎಲ್ ರಾಹುಲ್ ಅವರೊಂದಿಗೆ ಮೂರು ವರ್ಷಗಳಿಂದ ಡೇಟಿಂಗ್​ನಲ್ಲಿರುವ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಇನ್ನೇನು ಮೂರು ತಿಂಗಳಲ್ಲಿ ವಿವಾಹ ಜೀವನಕ್ಕೆ ಕಾಲಿಡಲಿದ್ದಾರೆ.

ವಿವಾಹದ ಸಿದ್ಧತೆಗಳು ಭರದಿಂದ ಸಾಗುತ್ತಿವೆ ಮತ್ತು ರಾಹುಲ್ ಅವರ ಪೋಷಕರು ಇತ್ತೀಚೆಗೆ ಅಥಿಯಾ ಅವರ ಕುಟುಂಬವನ್ನು ಭೇಟಿ ಮಾಡಲು ಮುಂಬೈಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮದುವೆ ಹಾಗೂ ಅದರ ಪ್ರತಿಯೊಂದು ಕಾರ್ಯಕ್ರಮಗಳನ್ನು ಅಥಿಯಾ ಶೆಟ್ಟಿಯವರೇ ಮುಂದೆ ನಿಂತು ನೋಡಿಕೊಳ್ಳುತ್ತಿದ್ದಾರೆ. ವಿವಾಹ ಕಾರ್ಯ ಮುಂಬೈನಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ಅಥಿಯಾ ಇತ್ತೀಚೆಗಷ್ಟೇ ಕೆ.ಎಲ್. ರಾಹುಲ್ ಅವರ ಚಿಕಿತ್ಸೆಗಾಗಿ ಜರ್ಮನಿಗೆ ತೆರಳಿದ್ದರು. ಗಾಯದ ಸಮಸ್ಯೆಯಿಂದಾಗಿ ಕ್ರಿಕೆಟಿಗ ಭಾರತದ ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿದಿದ್ದರು.

ಇವರಿಬ್ಬರು ಸುಮಾರು ಮೂರು ವರ್ಷಗಳಿಂದ ಪ್ರೇಮ ಸಂಬಂಧ ಹೊಂದಿದ್ದಾರೆ. ಹಾಗೆ ಚಲನಚಿತ್ರ ಪ್ರದರ್ಶನಗಳು, ಪಾರ್ಟಿಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರರ ಚಿತ್ರಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಅದಾಗ್ಯೂ ಮದುವೆ ಬಗ್ಗೆ ಈ ಜೋಡಿಯಿಂದ ಅಥವಾ ಅವರ ಕುಟುಂಬದಿಂದ ಇನ್ನೂ ಯಾವುದೇ ಅಧೀಕೃತ ಮಾಹಿತಿ ಹೊರ ಬಿದ್ದಿಲ್ಲ.

ಇದನ್ನೂ ಓದಿ: ಚಿತ್ರದುರ್ಗ: 20ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಚರ್ಚೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.