ETV Bharat / bharat

ಆಟೋ ನಿಲ್ಲಿಸದೇ ಸಬ್‌ಇನ್ಸ್​ಪೆಕ್ಟರ್​ಗೆ ಡಿಕ್ಕಿ ಹೊಡೆದ ಚಾಲಕ: ಸಿಸಿಟಿವಿ ದೃಶ್ಯ

author img

By

Published : Apr 5, 2022, 2:26 PM IST

Auto driver hit to Police sub Inspector in Tamil Nadu, Chennai Crime news, Police sub Inspector accident in Tamil Nadu, Tamil Nadu news, ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ಗೆ ಡಿಕ್ಕಿ ಹೊಡೆದ ಆಟೋ ಚಾಲಕ, ಚೆನ್ನೈ ಅಪರಾಧ ಸುದ್ದಿ, ತಮಿಳುನಾಡಿನಲ್ಲಿ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ಗೆ ಅಪಘಾತ, ತಮಿಳುನಾಡು ಸುದ್ದಿ,
ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರಸ್ತೆಯಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದ ಪೊಲೀಸ್‌ ಸಬ್​ ಇನ್ಸ್​ಪೆಕ್ಟರ್​ಗೆ ಆಟೋ ಗುದ್ದಿಸಿರುವ ಚಾಲಕ ಬಳಿಕ ಸ್ಥಳದಿಂದ ಪರಾರಿಯಾಗಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

ಚೆನ್ನೈ: ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಬ್​ ಇನ್ಸ್​ಪೆಕ್ಟರ್​ಗೆ ಆಟೋ ಗುದ್ದಿಸಿ ಚಾಲಕ ಪರಾರಿಯಾಗಿರುವ ಘಟನೆ ನಂದಂಬಾಕ್ಕಂನಲ್ಲಿ ನಡೆದಿದೆ. ಪರಿಣಾಮ, ಸಬ್​ ಇನ್ಸ್​ಪೆಕ್ಟರ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಸಬ್​ ಇನ್ಸ್​ಪೆಕ್ಟರ್​ ಬೋನ್​ರಾಜ್ ನಂದಂಬಾಕ್ಕಂ ಪೊಲೀಸ್​ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಏಪ್ರಿಲ್​ 3 ರಂದು ರಾತ್ರಿ ನಂದಂಬಾಕ್ಕಂ ರಸ್ತೆಯಲ್ಲಿ ಸಿಬ್ಬಂದಿ ಜೊತೆ ವಾಹನ ತಪಾಸಣೆಯಲ್ಲಿ ತೊಡಗಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಆಟೋ ರಿಕ್ಷಾ ನಿಲ್ಲಿಸುವಂತೆ ಬೋನ್‌ರಾಜ್‌ ಚಾಲಕನಿಗೆ ಸೂಚಿಸಿದ್ದಾರೆ. ಆದ್ರೆ ಚಾಲಕ ವಾಹನವನ್ನು ನಿಲ್ಲಿಸದೇ ಸಬ್‌ ಇನ್ಸ್‌ಪೆಕ್ಟರ್‌ ಮೇಲೆ ಗುದ್ದಿಸಿ ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ರಕ್ಷಕನು ಇವನೇ.. ಬೆಂಕಿಯಲ್ಲಿ ಸಾಹಸ.. ಹಸುಗೂಸನ್ನು ರಕ್ಷಿಸಿದ ಕಾನ್ಸ್​ಟೇಬಲ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.