ETV Bharat / bharat

ಇಬ್ಬರು ಉಗ್ರಗಾಮಿ ಸಹಚರರನ್ನು ಬಂಧಿಸಿದ ಬಂಡಿಪೋರಾ ಪೊಲೀಸರು

author img

By

Published : Feb 20, 2021, 1:49 PM IST

ಉತ್ತರ ಕಾಶ್ಮೀರದಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕ ಸಹಚರರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ಉಗ್ರಗಾಮಿ ಸಹಚರರನ್ನು ಬಂಧಿಸಿದ ಬಂಡೀಪೋರಾ ಪೊಲೀಸರು
Bandipora police arrest two militant associates

ಬಂಡಿಪೋರಾ: ಉತ್ತರ ಕಾಶ್ಮೀರದಲ್ಲಿ ಇಬ್ಬರು ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಸಹಚರರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ಅಬಿದ್ ವಾಜಾ ಮತ್ತು ಶಬೀರ್ ಅಹ್ಮದ್ ಗೊಜರ್ ಬಂಧಿತ ಭಯೋತ್ಪಾದಕ ಸಹಚರರಾಗಿದ್ದಾರೆ. ಇವರಿಬ್ಬರನ್ನು ಪಾಪಚನ್ ಬಂಡಿಪೋರ್​ ಸೇತುವೆ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಾಪಾಚನ್ ಬಂಡಿಪೋರ್ ಸೇತುವೆ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಕೂಡಲೇ ಇಬ್ಬರನ್ನು ಬಂಧಿಸಿ ಅವರಿಂದ ಎರಡು ಲೈವ್ ಹ್ಯಾಂಡ್ ಗ್ರೆನೇಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಓದಿ: ಸಹೋದರನ ಪ್ರಮಾಣಪತ್ರ ನೀಡಿ 12 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ಭೂಪ!​

ಆರೋಪಿಗಳು ಭಯೋತ್ಪಾದಕ ಸಸಂಘಟನೆ ಎಲ್‌ಇಟಿಯೊಂದಿಗೆ ಸಂಬಂಧ ಹೊಂದಿದ್ದು, ಈ ಪ್ರದೇಶದ ಎಲ್‌ಇಟಿಯ ಭಯೋತ್ಪಾದಕರಿಗೆ ಆಶ್ರಯ ಸೇರಿದಂತೆ ಅವರಿಗೆ ಬೇಕಾದ ವಸ್ತುಗಳನ್ನು ಒದಗಿಸುತ್ತಿದ್ದರು. ಅಷ್ಟೇ ಅಲ್ಲದೆ ಬಂಡಿಪೋರಾದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.