ETV Bharat / bharat

ಶಿಕ್ಷಕಿ ಕೊಲೆ ಬೆನ್ನಲ್ಲೇ ಬ್ಯಾಂಕ್ ಮ್ಯಾನೇಜರ್​ಗೆ​ ಗುಂಡಿಕ್ಕಿ ಹತ್ಯೆಗೈದ ಉಗ್ರ... ಸಿಸಿಟಿವಿಯಲ್ಲಿ ದೃಶ್ಯ ಸೆರೆ

author img

By

Published : Jun 2, 2022, 12:12 PM IST

Updated : Jun 2, 2022, 1:35 PM IST

ಜಮ್ಮು-ಕಾಶ್ಮೀರದಲ್ಲಿ ಮುಸ್ಲಿಮೇತರರ ಮೇಲಿನ ಗುಂಡಿನ ದಾಳಿ ಮುಂದುವರೆದಿದ್ದು, ಇಂದು ಸಹ ಬ್ಯಾಂಕ್​ ಮ್ಯಾನೇಜರ್​ವೋರ್ವರನ್ನ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Bank Manager From Rajasthan Shot Dead In Kulgam
Bank Manager From Rajasthan Shot Dead In Kulgam

ಶ್ರೀನಗರ(ಜಮ್ಮು-ಕಾಶ್ಮೀರ): ಕಳೆದ ಕೆಲ ದಿನಗಳಿಂದ ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮತ್ತಷ್ಟು ಹೆಚ್ಚಾಗಿದ್ದು, ಸರ್ಕಾರಿ ಅಧಿಕಾರಿಗಳನ್ನೇ ಗುಂಡಿಕ್ಕಿ ಹತ್ಯೆಗೈಯುತ್ತಿದ್ದಾರೆ. ಕಳೆದ ಕೆಲ ವಾರಗಳ ಹಿಂದೆ ತಹಶೀಲ್ದಾರ್ ಕಚೇರಿಗೆ ನುಗ್ಗಿ ಅಧಿಕಾರಿಯ ಹತ್ಯೆಗೈದಿದ್ದ ಉಗ್ರರು, ಮೂರು ದಿನಗಳ ಹಿಂದೆ ಶಾಲಾ ಶಿಕ್ಷಕಿಯೋರ್ವರಿಗೆ ಗುಂಡಿಕ್ಕಿದ್ದರು. ಇದರ ಬೆನ್ನಲ್ಲೇ ಇದೀಗ ಕುಲ್ಗಾಮ್​​ನಲ್ಲಿ ಬ್ಯಾಂಕ್​ ಮ್ಯಾನೇಜರ್​​ವೋರ್ವರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ ಮಾಡಲಾಗಿದೆ.

ಬ್ಯಾಂಕ್ ಮ್ಯಾನೇಜರ್​ಗೆ​ ಗುಂಡಿಕ್ಕಿ ಹತ್ಯೆಗೈದ ಉಗ್ರ ಪರಾರಿ

ಜಮ್ಮು-ಕಾಶ್ಮೀರದ ಕುಲ್ಗಾಮ್​ನಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ರಾಜಸ್ಥಾನ ಮೂಲದ ಬ್ಯಾಂಕ್​ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ ಮಾಡಿದ್ದಾರೆ. ಬ್ಯಾಂಕ್​​ನಲ್ಲಿ ಕೆಲಸ ಮಾಡ್ತಿದ್ದ ವೇಳೆ ಅಲ್ಲಿಗೆ ತೆರಳಿರುವ ಉಗ್ರ, ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಬ್ಯಾಂಕ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಕೇವಲ ಮೂರು ದಿನಗಳ ಅಂತರದಲ್ಲಿ ನಡೆದಿರುವ ಎರಡನೇ ಪ್ರಕರಣ ಇದಾಗಿದೆ. ಇಲಾಖಾಹಿ ದೇಹತಿ ಬ್ಯಾಂಕ್ ಮ್ಯಾನೇಜರ್​ ವಿಜಯ್ ಕುಮಾರ್​ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರನ್ನ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಶಿಕ್ಷಕಿ ಗುಂಡಿಕ್ಕಿ ಕೊಂದ ಉಗ್ರರು... ಶ್ರೀನಗರ-ಜಮ್ಮು ಹೈವೇ ಬಂದ್ ಮಾಡಿ ಪ್ರತಿಭಟನೆ ನಡೆಸಿರುವ ಕಾಶ್ಮೀರಿ ಪಂಡಿತರು

ಘಟನೆಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದು, ಕುಲ್ಗಾಮ್​ನಲ್ಲಿ ಈ ದಾಳಿ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಭದ್ರತಾ ಪಡೆ ಬೀಡು ಬಿಟ್ಟಿದೆ.

Bank Manager From Rajasthan Shot Dead In Kulgam
ಬ್ಯಾಂಕ್ ಮ್ಯಾನೇಜರ್​ ವಿಜಯ್ ಕುಮಾರ್ ಸಾವು

ಕಳೆದ ಮೂರು ದಿನಗಳ ಹಿಂದೆ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಕಾಶ್ಮೀರಿ ಪಂಡಿತ ಶಿಕ್ಷಕಿಯೋರ್ವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕುಲ್ಗಾಮ್​ ಪ್ರದೇಶದಲ್ಲಿ ನಡೆದಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ಸಹ ವ್ಯಕ್ತವಾಗಿದೆ. ಕಣಿವೆ ಪ್ರದೇಶದಲ್ಲಿ ಮುಸ್ಲಿಮೇತರ ನೌಕರರ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ ಕೇಳಿಬಂದಿದೆ.

ಅಶೋಕ್ ಗೆಹ್ಲೋಟ್ ಟ್ವೀಟ್​: ಘಟನೆಗೆ ಸಂಬಂಧಿಸಿದಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮ್ಮು-ಕಾಶ್ಮೀರದ ಕುಲ್ಗಾಮ್​​ನಲ್ಲಿ ಕೆಲಸ ಮಾಡ್ತಿದ್ದ ರಾಜಸ್ಥಾನದ ಹನುಮಾನ್​ಗಢನ ನಿವಾಸಿ ವಿಜಯ್ ಕುಮಾರ್ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ ಖಂಡನೀಯ. ಕಾಶ್ಮೀರದಲ್ಲಿ ಶಾಂತಿ ಕಾಪಾಡುವಲ್ಲಿ ಎನ್​​ಡಿಎ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅಲ್ಲಿ ವಾಸಿಸುತ್ತಿರುವ ನಾಗರಿಕರ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರ ಖಚಿತತೆ ನೀಡಬೇಕು ಎಂದಿದ್ದಾರೆ.

Last Updated : Jun 2, 2022, 1:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.