ETV Bharat / bharat

ಮಿಷನ್ ಶಕ್ತಿ ಅಭಿಯಾನ.. ಉತ್ತರಪ್ರದೇಶದಲ್ಲಿ 23 ಜನರಿಗೆ ಜೀವಾವಧಿ ಶಿಕ್ಷೆ

author img

By

Published : Oct 21, 2020, 2:59 PM IST

ರಾಜ್ಯದ 75 ಜಿಲ್ಲೆಗಳಲ್ಲಿ ಎಲ್ಲಾ 521 ಬ್ಲಾಕ್​​ಗಳು, 59,000 ಗ್ರಾಮ ಪಂಚಾಯತ್‌ಗಳು, 630 ನಗರ ಸ್ಥಳೀಯ ಸಂಸ್ಥೆಗಳು ಮತ್ತು 1,535 ಪೊಲೀಸ್ ಠಾಣೆಗಳಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ನೋಡಲ್ ಅಧಿಕಾರಿಗಳನ್ನ ನೇಮಿಸಲಾಗಿದೆ..

sentenced
23 ಜನರಿಗೆ ಜೀವಾವಧಿ ಶಿಕ್ಷೆ

ಲಖನೌ(ಉತ್ತರಪ್ರದೇಶ): ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 19 ಮತ್ತು 20 ರಂದು 23 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ರಾಜ್ಯ ಗೃಹ ಇಲಾಖೆ ತಿಳಿಸಿದೆ.

ಮಿಷನ್ ಶಕ್ತಿ ಅಭಿಯಾನದಡಿ ಈ ಕ್ರಮ ಕೈಗೊಳ್ಳಲಾಗಿದ್ದು, 31 ಆರೋಪಿಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಒಟ್ಟು 49 ಪ್ರಕರಣಗಳಲ್ಲಿ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.

ರಾಜ್ಯದಲ್ಲಿ ಅಪರಾಧ ಕೃತ್ಯಗಳನ್ನ ಕಡಿಮೆ ಮಾಡಲು ಉತ್ತರಪ್ರದೇಶ ಸರ್ಕಾರ 6 ತಿಂಗಳ ಕಾಲ ಮಹಿಳಾ ಸಬಲೀಕರಣ ಕಾರ್ಯಕ್ರಮ 'ಮಿಷನ್ ಶಕ್ತಿ' ಯನ್ನು ಪ್ರಾರಂಭಿಸಿತು. ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 17 ರಂದು ಈ ಯೋಜನೆ ಪ್ರಾರಂಭವಾಗಿದ್ದು, ಏಪ್ರಿಲ್‌ವರೆಗೆ ಮುಂದುವರಿಯಲಿದೆ.

ಮಿಷನ್ ಶಕ್ತಿಯ ಅಂಗವಾಗಿ, ಉತ್ತರಪ್ರದೇಶದ ಹೆಚ್ಚುವರಿ ಗೃಹ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಅಧಿಕೃತ ವೆಬ್‌ಸೈಟ್ upprosecution.upsdc.gov.in ಮತ್ತು ಯುಟ್ಯೂಬ್ ಚಾನೆಲ್ ಪ್ರಾರಂಭಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ವರ್ಚುವಲ್ ಕಾರ್ಯಕ್ರಮದ ಮೂಲಕ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಮಹಿಳಾ ಕಾನ್ಸ್​ಟೇಬಲ್​ಗಳ ಜತೆ ಸಂವಹನ ನಡೆಸಿದರು.

ರಾಜ್ಯದ 75 ಜಿಲ್ಲೆಗಳಲ್ಲಿ ಎಲ್ಲಾ 521 ಬ್ಲಾಕ್​​ಗಳು, 59,000 ಗ್ರಾಮ ಪಂಚಾಯತ್‌ಗಳು, 630 ನಗರ ಸ್ಥಳೀಯ ಸಂಸ್ಥೆಗಳು ಮತ್ತು 1,535 ಪೊಲೀಸ್ ಠಾಣೆಗಳಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ನೋಡಲ್ ಅಧಿಕಾರಿಗಳನ್ನ ನೇಮಿಸಲಾಗಿದೆ. ಸಮಸ್ಯೆಗಳನ್ನು ಆಲಿಸುವ ಸಲುವಾಗಿ 1090, 181, 1076, 108 ಮತ್ತು 102 ಎಂಬ ಸಹಾಯವಾಣಿಗಳನ್ನು ಆರಂಭಿಸಲಾಗಿದೆ ಎಂದು ರಾಜ್ಯ ಗೃಹ ಇಲಾಖೆ ಪ್ರಕಟಣೆ ಹೊರಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.