ETV Bharat / bharat

ಕಾಂಗ್ರೆಸ್​ ಮುಖಂಡ ಸಚಿನ್ ಪೈಲಟ್​ಗೆ ಕೊರೊನಾ: ಶೀಘ್ರ ಚೇತರಿಕೆಗೆ ಸಿಂಧ್ಯಾ ಹಾರೈಕೆ

author img

By

Published : Nov 12, 2020, 8:42 PM IST

ನಾನು ಕೋವಿಡ್ -19 ಸೋಂಕು ಪರೀಕ್ಷೆ ಮಾಡಿಸಿಕೊಂಡಿದ್ದೆ. ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕಳೆದ ಕೆಲವು ದಿನಗಳಿಂದ ಯಾರಾದರೂ ನನ್ನೊಂದಿಗೆ ಸಂಪರ್ಕಕ್ಕೆ ಬಂದಿರಬಹುದು. ದಯವಿಟ್ಟು ನೀವೂ ಪರೀಕ್ಷೆ ಮಾಡಿಸಿಕೊಳ್ಳಿ. ಸೂಕ್ತವಾಗಿ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುತ್ತಿದ್ದೇನೆ. ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ಇದೆ ಎಂದು ಸಚಿನ್ ಪೈಲಟ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

Sachin Pilot
ಸಚಿನ್ ಪೈಲಟ್

ನವದೆಹಲಿ: ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್​ ತಮಗೆ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ನಾನು ಕೋವಿಡ್-19 ಸೋಂಕು ಪರೀಕ್ಷೆ ಮಾಡಿಸಿಕೊಂಡಿದ್ದೆ. ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕಳೆದ ಕೆಲವು ದಿನಗಳಿಂದ ಯಾರಾದರೂ ನನ್ನೊಂದಿಗೆ ಸಂಪರ್ಕಕ್ಕೆ ಬಂದಿರಬಹುದು. ದಯವಿಟ್ಟು ನೀವೂ ಪರೀಕ್ಷೆ ಮಾಡಿಸಿಕೊಳ್ಳಿ. ಸೂಕ್ತವಾಗಿ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುತ್ತಿದ್ದೇನೆ. ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ಇದೆ ಎಂದು ಸಚಿನ್ ಪೈಲಟ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಸಚಿನ್ ಪೈಲಟ್​ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವಿಟರ್​ನಲ್ಲಿ ಹಾರೈಸಿದ್ದಾರೆ.

ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಜೀ ಅವರ ಅನಾರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದೇನೆ. ನಿಮ್ಮ ತ್ವರಿತ ಚೇತರಿಕೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿಯ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಟ್ವೀಟ್ ಮಾಡಿದ್ದಾರೆ.

  • राजस्थान के पूर्व उपमुख्यमंत्री श्री सचिन पायलट जी के अस्वस्थ होने की जानकारी मिली।
    ईश्वर से आपके शीघ्र स्वस्थ होने की कामना करता हूँ। @SachinPilot

    — Jyotiraditya M. Scindia (@JM_Scindia) November 12, 2020 " class="align-text-top noRightClick twitterSection" data=" ">
ETV Bharat Logo

Copyright © 2024 Ushodaya Enterprises Pvt. Ltd., All Rights Reserved.